‘ಅಶ್ಲೀಲ ವಿಡಿಯೋ’ ಪ್ರಕರಣ- ಅಂತಹವರ ವಿರುದ್ಧ “ಶೂನ್ಯ ಸಹಿಷ್ಣುತೆ . ಪ್ರಧಾನಿ ನರೇಂದ್ರ ಮೋದಿ

‘ಅಶ್ಲೀಲ ವಿಡಿಯೋ’ ಪ್ರಕರಣ- ಅಂತಹವರ ವಿರುದ್ಧ “ಶೂನ್ಯ ಸಹಿಷ್ಣುತೆ . ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣದ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಅಂತಹವರ ವಿರುದ್ಧ “ಶೂನ್ಯ ಸಹಿಷ್ಣುತೆ” ಇರಬೇಕು ಮತ್ತು ಲಭ್ಯವಿರುವ ಎಲ್ಲಾ ಕಾನೂನುಗಳನ್ನು ಬಳಸಿಕೊಂಡು ಅವರಿಗೆ “ಕಠಿಣ ಶಿಕ್ಷೆ” ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸಿದ್ದಾರೆ.ಈ ವಿಚಾರವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಸಾವಿರಾರು ವಿಡಿಯೋಗಳು ಒಂದು ದಿನದ್ದಲ್ಲ. ಪ್ರಜ್ವಲ್ ರಾಜ್ಯದಿಂದ ಪಲಾಯನ ಮಾಡಲು ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿದೆ ಮತ್ತು ಅವರು ದೇಶ ತೊರೆದ ನಂತರವೇ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಪ್ರಧಾನಿ ಆರೋಪಿಸಿದರು.ಏಪ್ರಿಲ್ 26 ರಂದು ಈ ಸ್ಥಾನದ ಮತದಾನ ಪೂರ್ಣಗೊಂಡಿದೆ. ಸಂದರ್ಶನವೊಂದರಲ್ಲಿ ಪ್ರಧಾನಿ ಮೋದಿ, “ಅಂತಹವರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕೆಂದು ನಾನು ಸ್ಪಷ್ಟ ಅಭಿಪ್ರಾಯ ಹೊಂದಿದ್ದೇನೆ. ಲಭ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಬಳಸಿಕೊಂಡು ಕಠಿಣ ಶಿಕ್ಷೆಯನ್ನು ನೀಡಬೇಕು” ಎಂದು ಹೇಳಿದರು.ಇದು ಕಾನೂನು-ಸುವ್ಯವಸ್ಥೆ ಸಮಸ್ಯೆ, ಬಂಗಾಳದಲ್ಲಿ ಇಂತಹ ಘಟನೆ ನಡೆದಿದ್ದರೆ ಬಂಗಾಳ ಸರ್ಕಾರವೇ ಹೊಣೆ, ಗುಜರಾತ್‌ನಲ್ಲಿ ನಡೆದಿದ್ದರೆ ಗುಜರಾತ್ ಸರ್ಕಾರ ಹೊಣೆ, ಒಂದು ವೇಳೆ ಆಂಧ್ರದಲ್ಲಿ ಆಗಿದ್ರೆ ಅದು ಆಂಧ್ರ ಸರ್ಕಾರವೇ ಹೊಣೆ. ಕರ್ನಾಟಕದಲ್ಲಿ ಇಂತಹ ಘಟನೆ ನಡೆದರೆ ಅದಕ್ಕೆ ಕರ್ನಾಟಕ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಹೇಳಿದರು.ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಿಡಿಯೋ ರೆಕಾರ್ಡ್ ಮಾಡಲಾಗಿದ್ದು, ಎರಡನೇ ಹಂತದ ಮತದಾನದ ವೇಳೆ ಒಕ್ಕಲಿಗ ಮತದಾರರು ತಮ್ಮ ಹಕ್ಕು ಚಲಾಯಿಸಿದ ನಂತರವೇ ಬಿಡುಗಡೆ ಮಾಡಲಾಗಿದೆ. “ಆದ್ರೂ, ಈ ಸಾವಿರಾರು ವಿಡಿಯೋಗಳು ಒಂದೇ ದಿನದ್ದಲ್ಲ. ಇದು ಜೆಡಿಎಸ್ (ಎಸ್) ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡ ಸಮಯ ಎಂದು ಸೂಚಿಸುತ್ತದೆ. ಈ ವಿಡಿಯೋಗಳನ್ನು ಅವರು ಅಧಿಕಾರದಲ್ಲಿದ್ದಾಗ ಸಂಗ್ರಹಿಸಲಾಗಿದೆ. ಅವರು ಅದನ್ನು ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿನ ಚುನಾವಣೆಯ ಸಮಯದಲ್ಲಿ ಬಿಡುಗಡೆ ಮಾಡಿದರು ಎಂದು ಪ್ರಧಾನಿ ಹೇಳಿದರು.ಅವ(ಪ್ರಜ್ವಲ್​)ನನ್ನು ದೇಶದಿಂದ ಕಳುಹಿಸಿದ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ. ನೀವು ಅವನನ್ನು ರಾಜ್ಯದಿಂದ ಹೋಗಲು ಅನುಮತಿಸಿದ್ದೀರಿ. ಇದು ತುಂಬಾ ಅನುಮಾನಾಸ್ಪದವಾಗಿದೆ ಎಂದು ಪ್ರಧಾನಿ ಹೇಳಿದರು. ಹೆಚ್‌ಡಿ ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಎದುರಿಸುತ್ತಿದ್ದಾರೆ.‘ಅಶ್ಲೀಲ ವಿಡಿಯೋ ಪ್ರಕರಣ’ಕ್ಕೆ ಸಂಬಂಧಿಸಿದ ಅಪಹರಣ ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಮೇ 8ರ ವರೆಗೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಸ್ಟಡಿಯಲ್ಲಿದ್ದರೆ, ಪ್ರಜ್ವಲ್ ರೇವಣ್ಣ ಬೇರೆ ದೇಶದಲ್ಲಿದ್ದಾರೆ. ಕರ್ನಾಟಕದಲ್ಲಿ ಇಂದು 14 ಲೋಕಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಏಪ್ರಿಲ್ 26 ರಂದು 14 ಸ್ಥಾನಗಳಿಗೆ ಮತದಾನ ನಡೆದಿತ್ತು. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುತೇಕ ಸ್ಥಾನಗಳನ್ನು ಪಡೆದಿತ್ತು. ಆದರೆ, ರಾಜ್ಯ ಸರ್ಕಾರದಲ್ಲಿ ಸಮ್ಮಿಶ್ರವಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

Previous Post
ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌‍ -ಶ್ರೇಯಸ್‌‍ ಪಟೇಲ್‌
Next Post
ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ

Recent News