ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿ ಹೇಗಿದೆ

ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿ ಹೇಗಿದೆ

ವಿಶಾಖಪಟ್ಟಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಹೈದರಾಬಾದ್‌ನಲ್ಲಿ ಮೊದಲ ಟೆಸ್ಟ್ ಸೋತ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿತ ಕಂಡಿದ್ದ ಭಾರತ ಎರಡನೇ ಟೆಸ್ಟ್ ಗೆದ್ದ ಬಳಿಕ 2ನೇ ಸ್ಥಾನಕ್ಕೆ ಜಿಗಿದಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿದ್ದ ಭಾರತ, ಎರಡನೇ ಟೆಸ್ಟ್‌ನಲ್ಲಿ ಆ ತಪ್ಪು ಮಾಡಲಿಲ್ಲ. ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಭಾರತದ ಗೆಲುವು ಸುಲಭವಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಜೈಸ್ವಾಲ್ ದ್ವಿಶತಕದ ನೆರವಿನಿಂದ 396 ರನ್ ಕಲೆಹಾಕಿತ್ತು. ಬಳಿಕ ಇಂಗ್ಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 253 ರನ್‌ಗಳಿಗೆ ಆಲೌಟ್ ಮಾಡಿತ್ತು. ಬುಮ್ರಾ 6 ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕಿದ್ದರು. 143 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಅವರ ಶತಕದ ನೆರವಿನಿಂದ 255 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್‌ಗೆ 399 ರನ್‌ಗಳ ಗುರಿಯನ್ನು ನೀಡಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ ಸತತವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಹೋಯಿತು. ದೊಡ್ಡ ಮೊತ್ತದ ಜೊತೆಯಾಟ ಬರಲು ಭಾರತದ ಬೌಲರ್ ಗಳು ಅವಕಾಶ ನೀಡಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ 292 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. 2ನೇ ಸ್ಥಾನಕ್ಕೇರಿದ ಭಾರತ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ಸರಣಿಯ ನಂತರ 54.16 ಶೇಕಡಾ ಅಂಕ (ಪಿಸಿಟಿ) ಗಳೊಂದಿಗೆ ಭಾರತ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಅಂತ್ಯದ ನಂತರ ಭಾರತವು 43.33 ಪಿಸಿಟಿಯೊಂದಿಗೆ ಐದನೇ ಸ್ಥಾನಕ್ಕೆ ಕುಸಿದಿತ್ತು. ಸೋಮವಾರ ಎರಡನೇ ಟೆಸ್ಟ್ ಗೆಲುವಿನ ನಂತರ ಆರು ಪಂದ್ಯಗಳಲ್ಲಿ ಮೂರು ಗೆಲುವುಗಳಿಂದ (ಒಂದು ಡ್ರಾ) 52.77 ಪಾಯಿಂಟ್‌ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಆಸ್ಟ್ರೇಲಿಯಾ ಇದುವರೆಗಿನ 10 ಪಂದ್ಯಗಳಲ್ಲಿ ಆರು ಗೆಲುವುಗಳಿಂದ (ಮತ್ತು ಡ್ರಾ) 55 ಪಿಸಿಟಿಯೊಂದಿಗೆ ಅಗ್ರಸ್ಥಾನದಲ್ಲಿದೆ. ವಿಶಾಖಪಟ್ಟಣಂನಲ್ಲಿನ ಗೆಲುವು ಇದೀಗ ಭಾರತವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಅವಕಾಶ ನೀಡಿದೆ. ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗುವ ಮೂರನೇ ಟೆಸ್ಟ್‌ನಲ್ಲಿ ಭಾರತ ಗೆದ್ದರೆ 59.5 ಪಿಸಿಟಿ ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಲಿದ್ದಾರೆ.

Previous Post
ಲೋಕಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 16 ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ರೆಡಿ?
Next Post
ಕುಟಂಬವಾದದ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲ: ಕಾಂಗ್ರೆಸ್‌ಗೆ ಕೌಂಟರ್ ಅಟ್ಯಾಕ್

Recent News