ಇಂದಿನಿಂದ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಿದ್ದು, ದೇವಾಲಯ ಮುಂಭಾಗದಲ್ಲಿಯೇ ಭಕ್ತಾದಿಗಳಿಗೆ ಜಾಗೃತಿ ಮೂಡಿಸುವ ಫಲಕಗಳನ್ನು ಹಾಕಲಾಗುತ್ತಿದೆ.

ಇಂದಿನಿಂದ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಿದ್ದು, ದೇವಾಲಯ ಮುಂಭಾಗದಲ್ಲಿಯೇ ಭಕ್ತಾದಿಗಳಿಗೆ ಜಾಗೃತಿ ಮೂಡಿಸುವ ಫಲಕಗಳನ್ನು ಹಾಕಲಾಗುತ್ತಿದೆ.

ಬೆಂಗಳೂರು ಜ.10- ಇಂದಿನಿಂದ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಿದ್ದು, ದೇವಾಲಯ ಮುಂಭಾಗದಲ್ಲಿಯೇ ಭಕ್ತಾದಿಗಳಿಗೆ ಜಾಗೃತಿ ಮೂಡಿಸುವ ಫಲಕಗಳನ್ನು ಹಾಕಲಾಗುತ್ತಿದೆ. ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ನೇತೃತ್ವದಲ್ಲಿ ಇಂದಿನಿಂದ ಅಭಿಯಾನ ನಡೆಸಲಿದ್ದು, ಇದರ ಭಾಗವಾಗಿ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಫಲಕಗಳಲ್ಲಿ ಸೂಚಿಸಲಾಗಿದೆ. ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮನವಿ ಮಾಡಿದೆ. ಇದೇ ವಿಚಾರವಾಗಿ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ಸಭೆ ನಡೆಸಿ ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ.
 ಈ ವಸ್ತ್ರಸಂಹಿತೆ ಪ್ರಕಾರ ಪುರು
ಷರು ದೇವಲಾಯಕ್ಕೆ ಚಡ್ಡಿ,
ಬರ್ಮುಡಾ, ಹರಿದ ಜೀನ್ಸ್, ಎದೆ
ಕಾಣುವ ಟಿಶರ್ಟ್ ಧರಿಸಿಕೊಂಡು
ಬರುವಂತಿಲ್ಲ.
 ಮಹಿಳೆಯರು ಸ್ಕರ್ಟ್, ಮಿಡಿ, ಹರಿದ
ಜೀನ್ಸ್, ಶಾಟ್ರ್ಸ್ ಹಾಕಿಕೊಂಡು ಬರು
ವಂತಿಲ್ಲ. ಒಂದು ವೇಳೆ ಬಂದರೆ
ಪ್ರವೇಶ ನಿರ್ಬಂಧಿಸಲಾಗಿದೆ.

Previous Post
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
Next Post
Ind vs Afg: ಮೊದಲ ಟಿ20 ಪಂದ್ಯಕ್ಕೆ ಮುನ್ನ ಭಾರತಕ್ಕೆ ಶಾಕ್: ಕೊಹ್ಲಿ ಆಡಲ್ಲ ಎಂದ ದ್ರಾವಿಡ್

Recent News