ಉಪಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಾನಗಲ್, ಸಿಂದಗಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ. ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಸಮಯ ಕೊಟ್ಟು‌ ಪ್ರಚಾರ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಾನಗಲ್ ಉಪ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದೇನೆ. ನಮ್ಮ ಅಭ್ಯರ್ಥಿಗಳು ಅತೀ ಹೆಚ್ಚು ಮತಗಳಿಂದ ಜಯಭೇರಿ ಬಾರಿಸುತ್ತಾರೆ ಎಂದರು.

ಸಂಗೂರು ಶುಗರ್ ಫ್ಯಾಕ್ಟರಿಗೆ ತನ್ನದೇ ಇತಿಹಾಸ ಇದೆ. ಅದನ್ನು ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳ‌ ಇದೆ.ಬಿಜೆಪಿ ಸರ್ಕಾರ ಬಂದಮೇಲೆ ಕಾರ್ಖಾನೆ ಆರಂಭಿಸಿ ಕಬ್ಬು ನುರಿಸುವ ಹಂತಕ್ಕೆ ತಂದಿದ್ದೇವೆ ಎಂದು ಅವರು ಹೇಳಿದರು.

ಇನ್ನೂ ತೈಲ ಬೆಲೆ ಇಳಿಕ ಬೆಲೆ ವಿಚಾರವಾಗಿ ಮಾತನಾಡಿದ ಅವರು, ಆರ್ಥಿಕತೆಯ ಮೇಲೆ ತೈಲ ಬೆಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕತೆ ಸುಧಾರಣೆ ಕಂಡರೆ ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆಯ ಬಗ್ಗೆ ಚಿಂತನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Previous Post
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
Next Post
ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ : ಸಿ.ಟಿ.ರವಿ ಸ್ಪಷ್ಟನೆ

Recent News