ಕಲಾಪಕ್ಕೆ ಅಡ್ಡಿಪಡಿಸಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು ವಿಪಕ್ಷಗಳ ಸಂಸದರ ವಿರುದ್ಧ ಮೋದಿ ಆಕ್ರೋಶ

ಕಲಾಪಕ್ಕೆ ಅಡ್ಡಿಪಡಿಸಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು ವಿಪಕ್ಷಗಳ ಸಂಸದರ ವಿರುದ್ಧ ಮೋದಿ ಆಕ್ರೋಶ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿ ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಿತ್ತುಕೊಳ್ಳುವ ಅಭ್ಯಾಸವಿರುವ ಸಂಸದರು ತಮ್ಮ ಸಂಸತ್ತಿನ ಸದಸ್ಯರಾಗಿದ್ದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಸಂಸತ್ತಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ಸ್ಮರಿಸುತ್ತಾರೆ. ಆದರೆ ಅಡ್ಡಿಪಡಿಸಿದ ಸದಸ್ಯರನ್ನು ನೆನಪಿಸಿಕೊಳ್ಳುವುದಿಲ್ಲ. ಈ ಬಜೆಟ್ ಅಧಿವೇಶನವು ಪಶ್ಚಾತ್ತಾಪ ಮತ್ತು ಸಕಾರಾತ್ಮಕ ಹೆಜ್ಜೆಗುರುತುಗಳನ್ನು ಬಿಡಲು ಒಂದು ಅವಕಾಶವಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ನಾನು ಎಲ್ಲ ಸಂಸದರನ್ನು ಕೋರುತ್ತೇನೆ ಎಂದಿದ್ದಾರೆ.

ದೇಶವು ಪ್ರಗತಿಯ ಹೊಸ ಎತ್ತರಗಳನ್ನು ಮುಟ್ಟುತ್ತಿದೆ. ದೇಶವು ಪ್ರಗತಿಯಲ್ಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ದೇಶವು ಸರ್ವತೋಮುಖ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಅನುಭವಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. ಹೊಸ ಸರ್ಕಾರ ರಚನೆಯಾದ ನಂತರ ಬಿಜೆಪಿ ಸಂಪೂರ್ಣ ಬಜೆಟ್ ಮಂಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಸಂಪ್ರದಾಯವನ್ನು ನಾವು ಅನುಸರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

Previous Post
ಹೊಸ ಸಂಸತ್ ಭವನದಲ್ಲಿ ರಾಷ್ಟ್ರಪತಿಗಳ ಮೊದಲ ಭಾಷಣ ಮೋದಿ ಸರ್ಕಾರದ ಪರ ದ್ರೌಪದಿ ಮುರ್ಮು ಬಹುಪರಾಕ್
Next Post
ಹೊಸ ಅಬಕಾರಿ ನೀತಿಯಲ್ಲಿ ಭ್ರಷಚಾರದ ಆರೋಪ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಐದನೇ ಬಾರಿಗೆ ಇಡಿ ಸಮನ್ಸ್

Recent News