ಕೆಎಲ್ ರಾಹುಲ್, ಜಡೇಜಾ ತಂಡದಿಂದ ಹೊರಕ್ಕೆ: ಸರ್ಫರಾಜ್‌ ಖಾನ್‌, ಮತ್ತಿಬ್ಬರಿಗೆ ಅವಕಾಶ

ಕೆಎಲ್ ರಾಹುಲ್, ಜಡೇಜಾ ತಂಡದಿಂದ ಹೊರಕ್ಕೆ: ಸರ್ಫರಾಜ್‌ ಖಾನ್‌, ಮತ್ತಿಬ್ಬರಿಗೆ ಅವಕಾಶ

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಸೋತು 0-1 ಹಿನ್ನಡೆ ಅನುಭವಿಸಿರುವ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ವೈಜಾಗ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಮಂಡಿರಜ್ಜು ಗಾಯಗೊಂಡರು, ರಾಹುಲ್ ಬಲ ಕ್ವಾಡ್ರೈಸ್ಪ್ ನೋವಿನ ಬಗ್ಗೆ ದೂರು ನೀಡಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ನಂತರ ಇನ್ನೂ ಮೂರು ಪಂದ್ಯಗಳನ್ನು ಆಡಲು, ಆಟಗಾರರನ್ನು ಬಿಸಿಸಿಐನ ವೈದ್ಯಕೀಯ ತಂಡವು ಮೇಲ್ವಿಚಾರಣೆ ಮಾಡುತ್ತಿದೆ.

“ಫೆಬ್ರವರಿ 02 ರಂದು ಇಂಗ್ಲೆಂಡ್ ವಿರುದ್ಧ ವೈಜಾಗ್‌ನಲ್ಲಿ ನಡೆಯಲಿರುವ ಎರಡನೇ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್‌ನಿಂದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಹೊರಗುಳಿದಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದಂದು ಜಡೇಜಾ ಅವರು ಮಂಡಿರಜ್ಜು ಗಾಯಗೊಂಡರು ಮತ್ತು ರಾಹುಲ್ ಬಲಭಾಗದ ಕ್ವಾಡ್ರೈಸ್ಪ್ ನೋವಿನ ಬಗ್ಗೆ ದೂರು ನೀಡಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಇಬ್ಬರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಫರಾಜ್‌ ಖಾನ್‌ಗೆ ಒಲಿದ ಅವಕಾಶ ಎರಡನೇ ಟೆಸ್ಟ್‌ಗೆ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಪುರುಷರ ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಭಾರತ ತಂಡಕ್ಕೆ ಸೇರಿಸಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸರ್ಫರಾಜ್ ಮತ್ತು ಸುಂದರ್ ಭಾರತ ಎ ತಂಡದ ಭಾಗವಾಗಿದ್ದರು. ಅಹಮದಾಬಾದ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ ಎ ಇಂಗ್ಲೆಂಡ್ ಲಯನ್ಸ್ ಅನ್ನು ಇನಿಂಗ್ಸ್ ಮತ್ತು 16 ರನ್‌ಗಳಿಂದ ಸೋಲಿಸಿತು. ಸರ್ಫರಾಜ್ ಅದ್ಭುತ 161 ರನ್ ಗಳಿಸಿದರು. ಮತ್ತೊಂದೆಡೆ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ಅರ್ಧಶತಕವನ್ನೂ ಗಳಿಸಿದರು. ಎರಡನೇ ಟೆಸ್ಟ್‌ಗೆ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

Previous Post
ಶಾಲಾ ಬಸ್‌ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು: ಪರಿಹಾರ ಘೋಷಿಸಿದ ಸಿಎಂ
Next Post
ಮುಂದಿನ 7 ದಿನದಲ್ಲಿ ‘ಸಿಎಎ’ ಜಾರಿ: ಕೇಂದ್ರ ಸರ್ಕಾರ

Recent News