ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ಮಾಜಿ ಡಿಸಿಎಂ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ಮಾಜಿ ಡಿಸಿಎಂ

ತೆಲಂಗಾಣ, ಜನವರಿ 26: ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪ ಮುಖ್ಯಮಂತ್ರಿ ಹಮೂದ್ ಅಲಿ ಕುಸಿದುಬಿದ್ದಿರುವ ಘಟನೆ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಬಿಆರ್‌ಎಸ್ ಮುಖಂಡರು ಕೂಡಲೇ ಎಚ್ಚೆತ್ತು ಅವರ ಕೈಗಳನ್ನು ಉಜ್ಜಿಕೊಂಡು ಪ್ರಥಮ ಚಿಕಿತ್ಸೆ ನೀಡಿ ನಂತರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ಮಹಮೂದ್ ಅಲಿ ಅವರ ಆರೋಗ್ಯ ಹದಗೆಟ್ಟಿತ್ತು. ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವೇಳೆ ಅಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದರು. ನೀರು ಕೊಡಿ ಎಂದು ಜನರು ಕೈಮುಗಿದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇಬ್ಬರು ಯುವಕರು ವಿದ್ಯುತ್ ಸ್ಪರ್ಶದಿಂದ ಸಾವು ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ದುರಂತದಲ್ಲಿ ಇಬ್ಬರು ಯುವಕರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಎಸ್ಸಿ ವಾಡಾದಲ್ಲಿ ಸಂಭವಿಸಿದ ಘಟನೆಯಲ್ಲಿ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ. 75ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಮೃತರನ್ನು ವಿಜಯ್ (25) ಮತ್ತು ಅಂಜಿತ್ (35) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವಕ ಚಕ್ರಿ (25) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೀತಕ್ಕ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

Previous Post
ಭಾರತಕ್ಕೆ 75ನೇ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದ ಕೆನಡಾ!
Next Post
ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

Recent News