ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ

ದೆಹಲಿ, ಜನವರಿ 25: ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ಕೊನೆಗೂ ಯಶಸ್ಸಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮತ್ತೆ ಕರೆತರುವ ವಿಚಾರವಾಗಿ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ಬಳಿಕ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದು, ಬಳಿಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಶೆಟ್ಟರ್ ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇ-ಮೇಲ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿದು ಬಂದಿದೆ.

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ದೆಹಲಿಯ್ಲಲಿ ಬಿಜೆಪಿ ಪಕ್ಷ ಸೇರ್ಪಡೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಜಗದೀಶ್‌ ಶೆಟ್ಟರ್‌ ವಾಪಸ್‌ ತರುವಲ್ಲಿ ರಾಜಾಹುಲಿ ರಣತಂತ್ರ..! ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕೆ ಮುನಿಸುಕೊಂಡು ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದರು, ಇದರ ಜೊತೆಗೆ ಲಕ್ಷ್ಮಣ್‌ ಸವದಿ ಕೂಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು, ಇದು ಬಿಜೆಪಿಗೆ ಭಾರಿ ಪೆಟ್ಟು ಕೊಟ್ಟಿತ್ತು, ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿತು. ಇದೆಲ್ಲದವನ್ನು ಮನಗಂಡ ಯಡಿಯೂರಪ್ಪ ಏನಾದ್ರೂ ಮಾಡಿ ಜಗದೀಶ್‌ ಶೆಟ್ಟರ್‌ ಅನ್ನು ಬಿಜೆಪಿಗೆ ಕರೆತರಲೇ ಬೇಕು ಎಂದು ಶಪಥ ಮಾಡಿದರು. ಲೋಕಸಭಾ ಚುನಾವಣೆ ಹೊತ್ತಲಿ ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಹೈಕಮಾಂಡ್‌ ಅನ್ನು ಮನವೊಲಿಸಿ, ಡೈರೆಕ್ಟ್‌ ಅಮಿತ್‌ ಶಾ ಜೊತೆಗೆ ಜಗದೀಶ್‌ ಶೆಟ್ಟರ್‌ ಅನ್ನು ಮಾತಾಡಿಸಿದ್ದಾರೆ, ಹಿರಿಯರ ಮಾತಿಗೆ ಕಟು ಬಿದ್ದು ಮತ್ತೆ ತವರಿಗೆ ಜಗದೀಶ್‌ ಶೆಟ್ಟರ್‌ ವಾಪಸ್‌ ಆಗಲು ಸಮ್ಮತಿ ಸೂಚಿಸಿದ್ದಾರೆ. ಜಗದೀಶ್‌ ಶೆಟ್ಟರ್‌ ಅನ್ನು ದಿಲ್ಲಿಗೆ ಕರೆದೊಯ್ದಿದ್ದೆ ಅವರ ಶಿಷ್ಯ ಶಂಕರ ಪಾಟೀಲ್‌ ಮುನೇನಕೊಪ್ಪ, ಈ ಹಿಂದೆ ಜಗದೀಶ್‌ ಶೆಟ್ಟರ್‌ ತನ್ನ ಶಿಷ್ಯನಾದ ಶಂಕರ ಪಾಟೀಲ್‌ ಮುನೇನಕೊಪ್ಪನನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ವಾಗ್ದಾನ ಕೊಟ್ಟಿದ್ದರು, ಆದ್ರೆ ಇದೀಗ ಶಿಷ್ಯನೇ ಗುರುವನ್ನು ಬಿಜೆಪಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ, ಅಲ್ಲದೇ ರಾಜ್ಯ ನಾಯಕರು ಹಾಗೂ ಹೈಕಮಾಂಡ್‌ ಒತ್ತಡಕ್ಕೆ ಜಗದೀಶ್‌ ಶೆಟ್ಟರ್‌ ಮನಸೋತು ಮರಳಿ ಗೂಡಿಗೆ ಬಂದಿದ್ದಾರೆ.

Previous Post
ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ; ಜ,24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ
Next Post
ಕ್ಯಾನ್ಸರ್‌ನಿಂದ ಬಳಲುತ್ತಿದ್ದ 7 ವರ್ಷದ ಮಗುವನ್ನು ಗಂಗಾ ನದಿಯಲ್ಲಿ ಅದ್ದಿದ ಪೋಷಕರು: ಉಸಿರು ಚೆಲ್ಲಿದ ಕೂಸು

Recent News