ಜೆ.ಪಿ ನಡ್ಡಾ ಭೇಟಿಯಾದ ಮಾಜಿ ಸಚಿವ ಡಾ.ಕೆ.ಸುಧಾಕರ್

ಜೆ.ಪಿ ನಡ್ಡಾ ಭೇಟಿಯಾದ ಮಾಜಿ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಮನವಿ
ನವದೆಹಲಿ : ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲೆ ಟಿಕೆಟ್ ಗಾಗಿ ಲಾಭಿ ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ದಾ ಅವರನ್ನ ಭೇಟಿಯಾಗಿರುವ ಮಾಜಿ ಸಚಿವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರದಿಂದ ಟಿಕೇಟ್ ನೀಡುವಂತೆ ಮನವಿ ಮಾಡಿದ್ದಾರೆ.

ಜೆಡಿಎಸ್ ಜೊತೆಗೆ ಮೈತ್ರಿ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರ ಯಾರಿಗೆ ಎನ್ನುವ ಗೊಂದಲಗಳು ಇನ್ನು ಮುಂದುವರಿದಿದೆ, ಒಂದು ವೇಳೆ ಜೆಡಿಎಸ್‌ಗೆ ಹಂಚಿಕೆಯಾದರೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಸ್ಪರ್ಧೆಗೆ ಅನುಮತಿ ಪಡೆಯುತ್ತೇವೆ ಈ ನಿಟ್ಟಿನಲ್ಲಿ ಪಕ್ಷ ಅವಕಾಶ ಮಾಡಿಕೊಡಬೇಕು ಎಂದು ಕೇಳಿದ್ದಾರೆ ಎಂದಯ ಮೂಲಗಳು ಹೇಳಿವೆ.

ಭೇಟಿ ಬಳಿಕ ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಯಿತು. ರಾಷ್ಟ್ರೀಯ ಅಧ್ಯಕ್ಷರಾಗಿ ನಾಲ್ಕು ವರ್ಷ ಪೂರೈಸಿರುವ ಅವರು ದೇಶದ ಉದ್ದಗಲಕ್ಕೂ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ನಮ್ಮೆಲ್ಲರ ನೆಚ್ಚಿನ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭಾರತದ ಪ್ರಧಾನಿ ಮಾಡಲು, ಮೂರನೇ ಅವಧಿಯಲ್ಲಿ ಅವರಿಗೆ ಕರ್ನಾಟಕದದಿಂದ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಜಯ ಸಾಧಿಸಲು ರೂಪಿಸಬೇಕಾದ ಕಾರ್ಯತಂತ್ರ, ಜೆಡಿಎಸ್ ಜೊತೆಗಿನ ಹೊಂದಾಣಿಕೆ, ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

Previous Post
ರಂಜಿತ್‌ ಹತ್ಯೆ ಪ್ರಕರಣ: 15 ಅಪರಾಧಿಗಳಿಗೆ ಮರಣದಂಡನೆ
Next Post
ಅಪೌಷ್ಟಿಕತೆ ನಿವಾರಣೆಗೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಸಚಿವ ಶರಣಪ್ರಕಾಶ್ ಪಾಟೀಲ್

Recent News