ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜ.8 ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜಕೀಯ ಮಾಡುತ್ತಿರುವುದು ಅವರು. ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ? ಎಂದು ಅವರು ಡಿಕೆಶಿ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಮ ಮಂದಿರಕ್ಕೆ ನಮಗೆ ಆಹ್ವಾನ ನೀಡಿಲ್ಲ ಎಂದು ದೂರಿರುವ ಡಿಕೆಶಿ ಆರೋಪದ ಬಗ್ಗೆ ಪ್ರತ್ಯುತ್ತರ ನೀಡಿದ ಅವರು; ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ ಅವರನ್ನು? ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ. ಉದ್ಘಾಟನೆ ದಿನ ಗೊಂದಲ ಆಗುವುದು ಬೇಡ. ಮುಂದೆ ದೇವಾಲಯವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮ ದೇವರ ದರ್ಶನ ಪಡೆಯಬಹುದು. ಆಗ ಯಾರು ಬೇಕಾದರೂ ಹೋಗಬಹುದು. ಅದಕ್ಕೇನು ಪರ್ಮಿಷನ್ ಬೇಕಾ? ಎಂದು ಚಾಟಿ ಬೀಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾಸ್ತಿ ಜನ ಇರುತ್ತಾರೆ. ಸಮಸ್ಯೆ ಆಗಬಾರದು ಎಂದು ಪ್ರಧಾನಿಗಳೇ ಮನವಿ ಮಾಡಿಕೊಂಡಿದ್ದಾರೆ. ರಾಮನ ಬಗ್ಗೆ ಭಕ್ತಿ ಇರುವವರು, ದೇವರ ಬಗ್ಗೆ ನಂಬಿಕೆ ಇರುವವರು ಅಲ್ಲಿಗೆ ಹೋಗಬಹುದು. ಡಿ.ಕೆ. ಶಿವಕುಮಾರ್ ಮನೆಯಲ್ಲಿ ಬರೀ ದೇವರ ಪೋಟೋಗಳು ಇವೆ. ದೇವರ ರಕ್ಷಣೆ ಇಲ್ಲದೆ ಹೋದರೆ ಅವರು ಉಳಿಯಬೇಕಲ್ಲವಾ? ಅದಕ್ಕೆ ಫೋಟೋಗಳನ್ನು ಹಾಕಿಕೊಂಡಿದ್ದಾರೆ ಕುಮಾರಸ್ವಾಮಿ ಅವರು ಡಿಕೆಶಿ ಅವರಿಗೆ ತಿರುಗೇಟು ನೀಡಿದರು.

ಸುಮಲತಾ ಅವರು ನನಗೇನು ಶತ್ರು ಅಲ್ಲ

ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ಎಂದು ತಾವು ನೀಡಿರುವ ಹೇಳಿಕೆಯ ಬಗ್ಗೆ ಮತ್ತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೇನು ಶತ್ರು ಅಲ್ಲ. ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು? ಆ ಹಿನ್ನೆಲೆಯಲ್ಲಿ ಈ ಹೇಳಿಕೆ ಅಷ್ಟೇ ಎಂದರು ಮಾಜಿ ಮುಖ್ಯಮಂತ್ರಿಗಳು.

ಅಯೋಧ್ಯೆಗೆ ದೇವೇಗೌಡರು ಹೋಗುವ ವಿಚಾರ

ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಮಾಜಿ ಪ್ರಧಾನಿಗಳ ಆರೋಗ್ಯದ ಪರಿಸ್ಥಿತಿಗಳ ಆಧಾರದ ಮೇಲೆ ಹೋಗುವ ಬಗ್ಗೆ ಮುಂದೆ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಲಹೆ ಏನಿದೆ, ಅದರ ಮೇಲೆ ಹೋಗಬೇಕಾ? ಬೇಡವಾ ಅಂತ ತೀರ್ಮಾನ ಮಾಡುತ್ತೇವೆ ಎಂದರು ಅವರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್. ಎಂ. ರಮೇಶ್ ಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

Previous Post
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಲು ಸ್ವಾಮೀಜಿಗಳು-ಚಿಂತಕರ ಒಕ್ಕೋರಲ ಒತ್ತಾಯ ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
Next Post
ನಟ ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಮೂವರು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Recent News