ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ : ಸಿ.ಟಿ.ರವಿ ಸ್ಪಷ್ಟನೆ

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಎಂದಿಗೂ ನಾನು ಪಕ್ಷದ ಕಾರ್ಯಕರ್ತ. ಆದರೆ, ಪಕ್ಷವು ನನಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೂ ನಾನು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T. Ravi) ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾರೆ ಅನ್ನುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಸದ್ಯ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತ್ರ.

ರಾಜ್ಯಾಧ್ಯಕ್ಷ ಸ್ಥಾನ ಅನ್ನೋದು ಒಂದು ದೊಡ್ಡ ಜವಾಬ್ದಾರಿ. ಅದನ್ನು ಕೇಳಿ ಪಡೆಯಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ. ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದರು.

ನಾಳೆ ದೆಹಲಿ ಭೇಟಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ನನ್ನ ಕಚೇರಿ ಖಾಲಿ ಮಾಡಬೇಕು. ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಇದರಲ್ಲಿ ವಿಶೇಷ ಏನೂ ಇಲ್ಲ.

Previous Post
ಉಪಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದ ಸಿಎಂ ಬೊಮ್ಮಾಯಿ
Next Post
ಕೇಂದ್ರದ ವಿರುದ್ಧ ಕಿಡಿಕಾರಿದ ರಾಹುಲ್

Recent News