ನಾಳೆ ರಾಜ್ಯ ಸರ್ಕಾರದ ೫ ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.

ನಾಳೆ ರಾಜ್ಯ ಸರ್ಕಾರದ ೫ ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.

ಬೆಂಗಳೂರು ಜ. 11 ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ನಾಳೆ ರಾಜ್ಯ ಸರ್ಕಾರದ ೫ ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ೨೦೨೩ ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ ೨ ವರ್ಷಗಳವರೆಗೆ ನಿರುದ್ಯೊಗ ಭತ್ಯೆ ನೀಡಲಾಗುವುದು. ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿಯನ್ನು ನೀಡಲಾಗುವುದು. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆಯಾಗಿದ್ದು ಉದ್ಯೋಗವನ್ನು ಒದಗಿಸಲು ಸಹಕಾರಿಯಾಗಲಿದೆ.

ಪ್ರಸ್ತುತ ೬೧,೭೦೦ ಪದವಿ/ಡಿಪ್ಲೊಮಾ ಹೊಂದಿದ ಅಭ್ಯರ್ಥಿಗಳು ಈ ಯೋಜನೆಯಡಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ೨೦೨೨-೨೩ ರಲ್ಲಿ ಒಟ್ಟು ೫.೨೯ ಲಕ್ಷ ವಿದ್ಯಾರ್ಥಿಗಳು ಪದವಿ/ಡಿಪ್ಲೊಮಾ ಮುಗಿಸಿದ್ದಾರೆ. ವಿದ್ಯಾಭ್ಯಾಸ ಮುಗಿದು ಆರು ತಿಂಗಳಾದರೂ ಉದ್ಯೋಗ ಸಿಗದವರು ಫಲಾನುಭವಿಗಳಾಗಲು ಅರ್ಹರಿದ್ದಾರೆ. ನೋಂದಣಿ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಮಾಡಬಹುದಾಗಿದೆ.

ಕಲಿಕೆ ಜೊತೆಗೆ ಕೌಶಲ್ಯಾಭಿವೃದ್ದಿ ಇಲಾಖೆ ಮೂಲಕ ಕೌಶಲ್ಯವನ್ನು ಕಲ್ಪಿಸಲಾಗುತ್ತಿದ್ದು ಸರ್ಕಾರ ಯುವಜನತೆಗೆ ನಿರುದ್ಯೋಗ ಸಮಸ್ಯೆ ಎದುರಿಸಲು ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಯುವನಿಧಿ ಯೋಜನೆ ಅನುಷ್ಟಾನ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಕಾರವಾರ, ಚಿತ್ರದುರ್ಗದಿಂದ ಸಹ ಯುಜನತೆ ಆಗಮಿಸಲಿದ್ದು ೧.೫ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಸಾಗಿವೆ. ಗೃಹಜ್ಯೋತಿ ಸುಮಾರು ಶೇ.೯೦ ರಷ್ಟು, ಗೃಹಲಕ್ಷ್ಮಿ ಶೇ.೯೩ ರಷ್ಟು, ಅನ್ನಭಾಗ್ಯ ಶೇ.೯೬ ರಷ್ಟು ಬಳಕೆಯಾಗುತ್ತಿದ್ದು, ಶಕ್ತಿ ಯೋಜನೆ ಮುಖಾಂತರ ೨೦೦ ಕೋಟಿ ಮಹಿಳೆಯರು ಕಳೆದ ೫ ತಿಂಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಒಂದು ಗ್ರಾಮ ಪಂಚಾಯಿತಿಗೆ ಈ ಯೋಜನೆಗಳಿಂದ ಒಂದು ತಿಂಗಳಿಗೆ ಸುಮಾರು ೭೫ ಲಕ್ಷದವರೆಗೆ ಅನುದಾನ ಲಭ್ಯವಾಗುತ್ತಿದೆ. ಹಾಗೂ ವರ್ಷಕ್ಕೆ ರೂ.೮ ಕೋಟಿ ಕುಟುಂಬಗಳಿಗೆ ಸರಾಸರಿ ರೂ.೫೦೦೦ ಭತ್ಯೆ ದೊರೆಯುತ್ತಿದ್ದು ಸಾಮಾನ್ಯ ಜನರಿಗೆ ಅನುಕೂಲವಾಗುತ್ತಿದೆ.

ಕಷ್ಟದಲ್ಲಿರುವವರಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೂ ಇತರೆ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುತ್ತಲಿದೆ ಇಂದು ವೈದ್ಯಕೀಯ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದರು ಎಂದರು.

Previous Post
ಮಳೆಯಿಂದಾಗಿ ಫೈನಲ್ ಪಂದ್ಯ ರದ್ದು; ಟ್ರೋಫಿ ಹಂಚಿಕೆ
Next Post
ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Recent News