ಪಕ್ಷಕ್ಕೆ ದುಡಿದ ಎಲ್ಲರಿಗೂ ಅವಕಾಶ; ಇದು ಹೈಕಮಾಂಡ್ ಸೂತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಪಕ್ಷಕ್ಕೆ ದುಡಿದ ಎಲ್ಲರಿಗೂ ಅವಕಾಶ; ಇದು ಹೈಕಮಾಂಡ್ ಸೂತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.28 “ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಾಧ್ಯದವರಿಗೆ ಪ್ರತಿಕ್ರಿಯೆ ನೀಡಿದರು.
ನಿಗಮ ಮಂಡಳಿ ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ಹೇಳಿದ್ದಿಷ್ಟು;

“ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ.

ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು.”

ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು?

ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ. ಬೇಡ ಎಂದವರು ಯಾರು? ವಿಧಾನಸಭಾ ಚುನಾವಣೆಯಲ್ಲಿ ನಾವು 136- 140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು”?

ಬಿಹಾರದಲ್ಲಿ ಜೆಡಿಯು ಹೊರಬರುತ್ತಿದೆ ಎಂದಾಗ “ನೀವೆ ಈ ವಿಚಾರವಾಗಿ ಹೇಳುತ್ತಿದ್ದೀರಿ. ಮುಂದೆ ಏನಾಗುತ್ತದೆ ನೋಡೋಣ”.

Previous Post
ಲೋಕಸಭಾ ಚುನಾವಣೆಗೆ ‘ಹಿಂದುಳಿದ ಜಾತಿಗಳ ಅಸ್ತ್ರ’!
Next Post
ಭಾರತ ದೇಶದ ಧ್ವಜ ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Recent News