ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೇ ಚರ್ಚಾದಲ್ಲಿ ‘ವಿದ್ಯಾರ್ಥಿಗಳೊಂದಿಗೆ’ ಸಂವಾದ ನಡೆಸಿದರು

ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾದಲ್ಲಿ ‘ವಿದ್ಯಾರ್ಥಿಗಳೊಂದಿಗೆ’ ಸಂವಾದ ನಡೆಸಿದರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪರೀಕ್ಷಾ ಪೇ ಚರ್ಚಾದಲ್ಲಿ ‘ವಿದ್ಯಾರ್ಥಿಗಳೊಂದಿಗೆ’ ಸಂವಾದ ನಡೆಸಿದರು ಮತ್ತು ಮೊಬೈಲ್ ಫೋನ್ ಬಳಕೆ, ಪೋಷಕ-ಮಕ್ಕಳ ಸಂಬಂಧ, ಇತರರಲ್ಲಿ ನಿರ್ದಿಷ್ಟ ಸ್ಟ್ರೀಮ್ ಅನ್ನು ಆಯ್ಕೆ ಮಾಡುವುದು ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದರು.ಮೊಬೈಲ್ ಫೋನ್ ಬಳಕೆಯ ಬಗ್ಗೆ ಮಾತನಾಡುವಾಗ, ಪಿಎಂ ಮೋದಿ “ಎಲ್ಲವೂ ಹೆಚ್ಚು ಕೆಟ್ಟದು” ಎಂದು ಹೇಳಿದರು ಮತ್ತು ವಿದ್ಯಾರ್ಥಿಗಳು ತಮ್ಮ ಪರದೆಯ ಸಮಯವನ್ನು ಕಡಿಮೆ ಮಾಡಲು ಸಲಹೆ ನೀಡಿದರು.

“ಅಗತ್ಯವಿದ್ದಾಗ ಮಾತ್ರ ನಾನು ಮೊಬೈಲ್ ಫೋನ್ ಬಳಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು, “ಮೊಬೈಲ್‌ನಲ್ಲಿ ಸ್ಕ್ರೀನ್ ಟೈಮ್ ಅಲರ್ಟ್ ಟೂಲ್‌ಗಳನ್ನು ಸೇರಿಸಿ. ನಿಮ್ಮ ಸ್ಕ್ರೀನ್ ಸಮಯವನ್ನು ಕಡಿಮೆ ಮಾಡಲು ಪ್ರಯತ್ನಿಸಿ.” ಮಕ್ಕಳ ಮೊಬೈಲ್ ಫೋನ್‌ಗಳ ಪಾಸ್‌ವರ್ಡ್‌ಗಳನ್ನು ಕುಟುಂಬ ಸದಸ್ಯರು ತಿಳಿದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.”ಮೊಬೈಲ್ ಮಾತ್ರವಲ್ಲದೇ ಯಾವುದಕ್ಕೂ ಅಧಿಕ ಬಳಕೆ ಯಾರಿಗೂ ಒಳ್ಳೆಯದನ್ನು ಮಾಡುವುದಿಲ್ಲ. ಎಲ್ಲದಕ್ಕೂ ಒಂದು ಮಾನದಂಡ ಇರಬೇಕು, ಅದಕ್ಕೊಂದು ಆಧಾರವಿದೆ. ಯಾವುದನ್ನಾದರೂ ಎಷ್ಟು ಬಳಸಬೇಕು ಎಂಬ ವಿವೇಚನೆ ಬಹಳ ಮುಖ್ಯ. ನಾವು ತಂತ್ರಜ್ಞಾನದಿಂದ ಓಡಿಹೋಗದೆ ಧನಾತ್ಮಕವಾಗಿ ಬಳಸಿಕೊಳ್ಳಬೇಕು,” ಎಂದು ಹೇಳಿದರು.”ಗ್ಯಾಜೆಟ್‌ಗಳನ್ನು ಬಳಸುವುದರೊಂದಿಗೆ ಸಮಯ-ಟ್ರ್ಯಾಕಿಂಗ್ ಪರಿಕರಗಳು ಮತ್ತು ಅಪ್ಲಿಕೇಶನ್‌ಗಳು ಇರಬೇಕು. ನಿಮ್ಮ ಗ್ಯಾಜೆಟ್‌ಗಳು ನಿಮ್ಮ ಪರದೆಯ ಸಮಯವನ್ನು ಟ್ರ್ಯಾಕ್ ಮಾಡುವ ಅಪ್ಲಿಕೇಶನ್‌ಗಳನ್ನು ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಿ. ಮೊಬೈಲ್ ಫೋನ್‌ಗಳನ್ನು ಬಳಸುವಾಗ ಅವರ ಸಮಯವನ್ನು ಗೌರವಿಸಲು ಒಬ್ಬರು ಮರೆಯಬಾರದು. ತಂತ್ರಜ್ಞಾನವನ್ನು ಧನಾತ್ಮಕವಾಗಿ ಬಳಸುವ ಬುದ್ಧಿವಂತಿಕೆಯನ್ನು ನಾವು ಹೊಂದಿರಬೇಕು. ,” ಎಂದು ಪ್ರಧಾನಿ ಮೋದಿ ಹೇಳಿದರು.ಸಣ್ಣ ಗುರಿಗಳನ್ನು ಹೊಂದಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಪ್ರಧಾನಿ ಮೋದಿ, “ಕೆಲವೊಮ್ಮೆ ಮಕ್ಕಳು ತಮ್ಮ ಮೇಲೆ ಒತ್ತಡ ಹೇರುತ್ತಾರೆ, ಅವರು ಮಾರ್ಕ್‌ಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿಲ್ಲ. ತಯಾರಿ ಸಮಯದಲ್ಲಿ ಸಣ್ಣ ಗುರಿಗಳನ್ನು ಹೊಂದಿಸಿ ಮತ್ತು ನಿಮ್ಮ ಕಾರ್ಯಕ್ಷಮತೆಯನ್ನು ಕ್ರಮೇಣ ಸುಧಾರಿಸಲು ನಾನು ಸಲಹೆ ನೀಡುತ್ತೇನೆ “ಎಂದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ.

ಬೆಂಗಳೂರು, ಜನವರಿ 29: ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ”ಪರಿಹಾರ ಕೊಡಿ ಕುರ್ಚಿ ಬಿಡಿ” ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ, ಪರಿಹಾರ ಕೊಡಿ ಎಂದು ಕೇಳಿದಾಗೆಲ್ಲ ನಾವೇನು ನೋಟ್ ಪ್ರಿಂಟಿಂಗ್ ಮೆಷಿನ್ ಇಟ್ಟು ಕೊಂಡಿದ್ದೆವೆಯೇ ಎಂದು ಧಾಷ್ಟ್ಯದಿಂದ ಕೇಳಿದ್ದು ಇದೇ ಬಿಜೆಪಿ ಮುಖ್ಯಮಂತ್ರಿಗಳು. ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು ಎಂದು ಅರ್ಥಮಾಡಿಕೊಳ್ಳದಷ್ಟು ರೈತರು ದಡ್ಡರಲ್ಲ. ಬರಗಾಲದ ಸೂಚನೆ ಸಿಗುತ್ತಿದ್ದಂತೆಯೇ ನಮ್ಮ ಸರ್ಕಾರ ಯುದ್ಧೋಪಾದಿಯಲ್ಲಿ ಸಮೀಕ್ಷೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಸಮೀಕ್ಷೆಯ ನಂತರ ಕಳೆದ ವರ್ಷದ ಸೆಪ್ಟೆಂಬರ್ 13ರಂದು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ನಮ್ಮ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ರೂ.37 ಸಾವಿರ ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇದರಲ್ಲಿ 18,177 ಕೋಟಿ ರೂಪಾಯಿ ಪರಿಹಾರವನ್ನು ನೀಡುವಂತೆ ಸೆ.23ಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಕ್ಟೋಬರ್‌ನಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಜ್ಞರ ತಂಡ ಆಗಮಿಸಿತ್ತು. ಇಲ್ಲಿಯ ವರಗೆ ಅದು ನೀಡಿರುವ ವರದಿಯ ಗತಿ ಏನಾಗಿದೆಯೋ ಗೊತ್ತಿಲ್ಲ. ಕಂದಾಯ ಸಚಿವ ಕೃಷ್ಣಭೈರೇಗೌಡರ ಜೊತೆ ನಾನು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಕೃಷಿ ಸಚಿವರು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಲ್ಲಿಯ ವರೆಗೆ ಬರ ಪರಿಹಾರ ಕೋರಿ 17 ಪತ್ರಗಳನ್ನು ಬರೆದಿದ್ದೇವೆ. ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರು ಯಾವ ಮುಖ ಹೊತ್ತು ಬರಪೀಡಿತ ರೈತರ ಬಳಿ ನಮ್ಮ ವಿರುದ್ಧ ದೂರು ತೆಗೆದುಕೊಂಡು ಹೋಗುತ್ತಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದಿಂದ ಈಗಾಗಲೇ ರಾಜ್ಯದ ರೈತರು ರೊಚ್ಚಿಗೆದ್ದಿದ್ದಾರೆ. ಆದ್ದರಿಂದ ಅವರ ಬಳಿ ಹೋಗುವಾಗ ಜಾಗ್ರತೆಯಿಂದ ಇರಿ ಎಂದಷ್ಟೇ ಹೇಳಬಯಸುತ್ತೇನೆ. ಕೇಂದ್ರ ಸರ್ಕಾರ ಪರಿಹಾರ ನೀಡದೆ ಇದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿಲ್ಲ. ಬರಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 870 ಕೋಟಿ ರೂಪಾಯಿಗಳಿದೆ. ಬರಪೀಡಿತ 36 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತಿದ್ದೇವೆ. 21 ಜಿಲ್ಲೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಸಲು ಟೆಂಡರ್ ಕರೆದಿದ್ದೇವೆ. 158 ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೋಡಲಾಗಿದೆ. ಖಾಸಗಿ ಜಮೀನು ಇರುವ 3,000 ಕಡೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಲು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಎಲ್ಲಿಯೂ ಕುಡಿಯುವ ನೀರಿನ ಕೊರತೆ ಇಲ್ಲ. ಬಿತ್ತನೆ ಬೀಜದ ಆರುವರೆ ಲಕ್ಷ ಕಿಟ್ ಗಳನ್ನು ವಿತರಿಸಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆದಿದ್ದೇವೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಾಚರಣೆ ಪಡೆಯನ್ನು ರಚಿಸಲಾಗಿದೆ. ಈ ಪಡೆಗಳು ಇಲ್ಲಿಯ ವರೆಗೆ 350ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 210 ಸಭೆಗಳನ್ನು ನಡೆಸಿದೆ. ಜನವರಿ 25ರ ವರೆಗೆ ಬರಪೀಡಿತ ಪ್ರದೇಶದ 29 ಲಕ್ಷ ರೈತರಿಗೆ 545 ಕೋಟಿ ರೂ. ಪರಿಹಾರ ನೀಡಲಾಗಿದೆ. ರೈತರ ಬೆಳೆಹಾನಿ ಸಮೀಕ್ಷೆಯ ನಂತರ ಇನ್ನೂ 8-9 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಈ ದಾಖಲೀಕರಣದಲ್ಲಿ ಎದುರಾಗಿರುವ ತೊಡಕುಗಳನ್ನು ಸರಿಪಡಿಸಲಾಗಿದೆ. ಬರಪೀಡಿತ ಪ್ರದೇಶದಲ್ಲಿ ನಮ್ಮ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಜಿದ್ದಿಗೆ ಬಿದ್ದವರಂತೆ ಪೈಸೆ ಪರಿಹಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಈ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೋರಾಟದ ನಾಟಕ ಮಾಡುತ್ತಿದ್ದಾರೆ. ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಮುಂದೆ ಧರಣಿ ಕೂರಬೇಕು. ಇವರ ಆಟಾಟೋಪಗಳೇನಿದ್ದರೂ ರಾಜ್ಯದಲ್ಲಿ ಮಾತ್ರ, ಇಲ್ಲಿ ಎಲ್ಲರು ಹುಲಿ-ಸಿಂಹಗಳೇ, ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ. ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ ಎಂದು ಹೇಳಿದ್ದಾರೆ.

ಬೆಂಗಳೂರು,ಜ.29- ನನಗೆ ಸಿಎಂ ಆಗಬೇಕು ಎಂಬ ಆಸೆಯಿದೆ. ಆದರೆ ಸಚಿವ ಸ್ಥಾನ ಕೊಡಲಿಲ್ಲ ಎಂದು ಬೇಸರ ಮಾಡಿಕೊಳ್ಳುತ್ತಾ ಕುಳಿತುಕೊಳ್ಳಲಾಗುತ್ತಿಲ್ಲ. ಎಲ್ಲದಕ್ಕೂ ಸಹನೆ, ಸಮಯ ಅಗತ್ಯವಿದೆ ಎಂದು ಬಿಡಿಎ ನೂತನ ಅಧ್ಯಕ್ಷ ಎನ್.ಎ.ಹ್ಯಾರಿಸ್ ಹೇಳಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ತೃಪ್ತಿ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ, ಸಿಗಬೇಕಲ್ಲ.ಸಚಿವ ಸ್ಥಾನ ಕೊಟ್ಟಿಲ್ಲ ಎಂದು ಹೇಳುತ್ತಾ ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ರಾಜಕೀಯದಲ್ಲಿ ಸಹನೆ ಇರಬೇಕು, ಸಮಯ ಮತ್ತು ಅವಕಾಶಗಳು ಬರಬೇಕು. ನಾನು ಸಹನೆಯಿಂದ ಕಾಯುತ್ತೇನೆ ಎಂದು ತಿಳಿಸಿದರು.

ಶಾಂತಿನಗರವನ್ನೇ ಅಭಿವೃದ್ಧಿ ಮಾಡಿಲ್ಲ. ಬಿಡಿಎಯನ್ನು ಇನ್ನೇನು ಅಭಿವೃದ್ಧಿ ಮಾಡುತ್ತಾರೆ ಎಂದು ಕೆಲವರು ಟೀಕೆ ಮಾಡುವುದನ್ನು ಕಂಡಿದ್ದೇನೆ. ನಾನಿಲ್ಲಿ ರಾಜಕೀಯ ಭಾಷಣ ಮಾಡಲು ಬಂದಿಲ್ಲ. ಅಭಿವೃದ್ಧಿ ಎಂದರೆ ಏನು, ಬಿಡಿಎ ಎಂದರೆ ಏನು ಎಂದು ತಿಳಿದುಕೊಳ್ಳದೇ ಇರುವವರ ಟೀಕೆಗಳಿಗೆಲ್ಲಾ ಉತ್ತರ ನೀಡುವುದು ಅನಗತ್ಯ ಎಂದು ಹೇಳಿದರು.ಬೆಂಗಳೂರು ಅತ್ಯಂತ ಸುಂದರ ನಗರ. ಇದನ್ನು ಉಳಿಸಿಕೊಳ್ಳಬೇಕು ಮತ್ತು ಬೆಳೆಸಬೇಕು. ಮತ್ತಷ್ಟು ಬಡಾವಣೆಗಳ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು. ಬೆಂಗಳೂರಿನ ಸುಧಾರಣೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುವುದಾಗಿ ಹೇಳಿದರು.ನಾನು ಬೆಂಗಳೂರಿನಲ್ಲಿ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅರಿವಿದೆ. ವಿರೋಧ ಪಕ್ಷಗಳು ಕೇವಲ ಟೀಕೆ ಮಾಡುತ್ತಾ ಕುಳಿತುಕೊಂಡರೆ ಅದರಿಂದ ನಷ್ಟವಾಗುವುದು ಜನರಿಗೆ. ಸಮಸ್ಯೆಗಳ ಜೊತೆಗೆ ಪರಿಹಾರದ ಸಲಹೆಯನ್ನು ನೀಡಿ ನಾನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದರು.ಮಂಡ್ಯದ ಕೆರಗೋಡಿನಲ್ಲಿ ಧ್ವಜ ವಿವಾದಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷಗಳ ಗಲಾಟೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧಪಕ್ಷವಾಗಿ ಅವರಿಗೆ ಇರುವುದು ಅದೇ ಕೆಲಸ. ಅದನ್ನವರು ಮಾಡುತ್ತಾ ಇರಲಿ, ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದು ಹೇಳಿದರು.

ಬೆಂಗಳೂರು, ಜನವರಿ 29: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯು ತನ್ನ ಎಲ್ಲ ಪ್ಲೀಟ್‌ಗಳ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಡಿಯೋ, ಸಾರ್ವಜನಿಕ ವಿಳಾಸ ಒದಗಿಸುವ ವ್ಯವಸ್ಥೆ ಕಡ್ಡಾಯವಾಗಿ ಅಳವಡಿಸಿಕೊಂಡಿಲ್ಲ. ಈ ಸಂಬಂಧ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.ಆಡಿಯೋ ಅನೌಂನ್ಸಮೆಂಟ್, ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಮುಂದಿನ ಏಪ್ರಿಲ್ 15 ರೊಳಗೆ ತನ್ನ ಎಲ್ಲಾ ಫ್ಲೀಟ್‌ಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ)ಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ ಎಂದು ‘ಡಿಎಚ್’‌ ವರದಿ ಮಾಡಿದೆ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಪ್ರಯಾಣಿಕರು ಮಾತ್ರ ನಿಗಮದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಇಲ್ಲಿನ ವ್ಯವಸ್ಥೆಯ ಅಸಮರ್ಥತೆ ಮತ್ತು ಪರಸ್ಪರ ಹೊಂದಾಣಿಕೆ ಇಲ್ಲದಿರುವುದರಿಂದ ವಿಳಾಸ ತಿಳಿಸುವ ಪ್ರದರ್ಶನಗಳು (ಅಡ್ರೆಸ್/ಬಸ್‌ನಂಬರ್ ಡಿಸ್‌ಪ್ಲೈ), ಆಡಿಯೋ ಪ್ರಕಟಣೆ ಯಾವುದು ಜಾರಿಯಾಗಿಲ್ಲ ಎಂದು ದೂರಿದರು,ಶೀಘ್ರವೇ ನೂರಾರು ಇವಿ ಬಸ್ ಕಾರ್ಯಾಚರಣೆ, ಟೆಂಡರ್ ಆಹ್ವಾನ ಸಮಸ್ಯೆ ಎದುರಿಸುತ್ತಿರುವ ಪ್ರಯಾಣಿಕರು ಆಡಿಯೋ ಮತ್ತು ದೃಶ್ಯ ಪ್ರದರ್ಶನಗಳು ಇಲ್ಲದಿರುವುದು ಪ್ರಯಾಣಿಕರ ಪ್ರಾಥಮಿಕ ಸಮಸ್ಯೆಯಾಗಿದೆ. ಉಳಿದಂತೆ ಸಾರ್ವಜನಿಕ ವಿಳಾಸ ವ್ಯವಸ್ಥೆ ಸಕ್ರಿಯಗೊಳಿಸಲು ಸಿಬ್ಬಂದಿಗೆ ಇಷ್ಟವಿಲ್ಲ. ಇದರಿಂದ ಬಸ್‌ನ ಗಮ್ಯಸ್ಥಾನ ಮತ್ತು ಅದರ ಪ್ರಸ್ತುತ ನಿಲ್ದಾಣದ ನಡುವೆ ವ್ಯತ್ಯಾಸವನ್ನು ಪ್ರಯಾಣಿಕರಿಗೆ ಗುರುತಿಸಲು ಕಷ್ಟವಾಗುತ್ತಿದೆ ಎಂದರು. ಬಸ್‌ಗಳಲ್ಲಿ ಅನೇಕ ಸಂದರ್ಭಗಳಲ್ಲಿ ಧ್ವನಿ ಪ್ರಕಟಣೆಗಳು ನಿಖರವಾಗಿಲ್ಲ. ಉದಾಹರಣೆಗೆ, ಜಯನಗರ 4ನೇ ಬ್ಲಾಕ್‌ನಿಂದ ಕೆಆರ್ ಮಾರ್ಕೆಟ್‌ಗೆ ತೆರಳುತ್ತಿದ್ದ ಬಸ್ ಮಕ್ಕಳಕೂಟ ನಿಲ್ದಾಣಕ್ಕೆ ನಿಲ್ಲಬೇಕು. ಅದಕ್ಕಾಗಿ ಧ್ವನಿ ಪ್ರಕಟಣೆ/ಘೋಷಣೆ ಮಾಡಲಿಲ್ಲ. ಬಸ್‌ನಲ್ಲಿ ನಾಲ್ಕು ಸ್ಪೀಕರ್‌ಗಳು ಇದ್ದರು ಸಹಿತ ಕೇಳಿಸದಂತಿವೆ. ಚಾಲಕರು-ನಿರ್ವಾಹಕರು ಹೇಳೋದೇನು? ಪ್ರಯಾಣಿಕರು ಕೇಳುವಂತೆ ಧ್ವನಿ ಘೋಷಣೆಗಳು ಮೊಳಗುತ್ತಿಲ್ಲ. ಪಿಎ ಸಿಸ್ಟಮ್‌ಗಳನ್ನು ಸಕ್ರಿಯಗೊಳಿಸುವುದು, ಅದರ ಅಗತ್ಯಗೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ವ್ಯವಸ್ಥೆಗಳನ್ನು ಮೊದಲ ಬಾರಿಗೆ ಅಳವಡಿಸಿದಾಗ ಬಿಎಂಟಿಸಿ ಪ್ರಯಾಣಿಕರಿಗೆ ಇವೆಲ್ಲವು ಒಳ್ಳೆಯದು ಸಹಕಾರಿಯಾಗಿದ್ದು, ಆದರೆ ನಿತ್ಯ ಓಡಾಡುವ ಸಾಮಾನ್ಯ ಪ್ರಯಾಣಿಕರಿಗೆ ಇದು ಅನಗತ್ಯ. ಬಸ್‌ನಲ್ಲಿ ದೃಷ್ಠಿ ಇಲ್ಲದ ವ್ಯಕ್ತಿಗಳು ಏಕಾಂಗಿಯಾಗಿ ಪ್ರಯಾಣಿಸುವುದಿಲ್ಲ ಎಂದು ಅವರು ಹೇಳಿದರು. ಇವುಗಳು ಪ್ರಯಾಣದ ಸಮಯದಲ್ಲಿ ಪ್ರಯಾಣಿಕರಿಗೆ ಎಚ್ಚರದಿಂದಿರಲು ಸಹಾಯ ಮಾಡುತ್ತವೆ ಎಂದು ಪ್ರಯಾಣಿಕರು ಭಾವಿಸಿದ್ದಾರೆ. ಮೆಟ್ರೋಗಿಂತ ಭಿನ್ನವಾಗಿ, ರೈಲು ನಿಗದಿತ ವೇಳಾಪಟ್ಟಿ ಅನುಸರಿಸುತ್ತದೆ. ಪದೇ ಪದೆ ಘೋಷಣೆ ಮೊಳಗಿಸುತ್ತಿರುತ್ತದೆ. ಅದೇ ರೀತಿ ಬಸ್‌ಗಳ ಸಂಚಾರ ನ್ಯಾವಿಗೇಟ್ ಮಾಡಬೇಕು. ಆದ್ದರಿಂದ ಸುಧಾರಿತ PA ವ್ಯವಸ್ಥೆ ಹೊಂದುವುದು ಪ್ರಯೋಜನಕಾರಿ ಆಗಿದೆ. ಆದರೆ ಅದು ಸರಿಯಾಗಿ ಮತ್ತು ಮನಬಂದಂತೆ ಕಾರ್ಯ ನಿರ್ವಹಿಸಬೇಕು ಐಟಿ ಉದ್ಯೋಗಿಯೊಬ್ಬರು ಅಭಿಪ್ರಾಯ ಹಂಚಿಕೊಂಡರು. ದೃಶ್ಯ ಪ್ರದರ್ಶನಕ್ಕೂ, ಆಡಿಯೋ ಸಿಂಕ್ರೋನೈಸ್ ಆಗಿಲ್ಲ ಬಿಎಂಟಿಸಿ ತನ್ನೆಲ್ಲ ಫ್ಲೀಟ್‌ಗಳಲ್ಲಿ ಆಡಿಯೊ ಪ್ರಕಟಣೆಗಳನ್ನು ಅಳವಡಿಸಲು ಹೈಕೋರ್ಟ್ ನಿರ್ದೇಶನ ನೀಡಿದ ತಕ್ಷಣ ಘೋಷಣೆ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ. ಆದರೆ ಇದರ ಜಾರಿ ಸವಾಲಾಗಿದೆ. ಬಸ್‌ಗಳಲ್ಲಿ ಡಿಸ್‌ಪ್ಲೈ (ಪರದೆ) ಮುಂದಿನ ನಿಲ್ದಾಣ ತೋರಿಸುತ್ತದೆ. ಆದರೆ ಆಡಿಯೋ ಅದಕ್ಕೆ ಸಿಂಕ್ರೋನೈಸ್ ಆಗಿಲ್ಲ. ಕೆಲವು ಸಮಯಗಳಲ್ಲಿ, ಯಾವುದೇ ಆಡಿಯೊ ಇಲ್ಲದೆ ಸ್ಕ್ರೋಲಿಂಗ್ ಪ್ರದರ್ಶನ ಮಾತ್ರ ಇರುತ್ತದೆ. ಈ ಬಗ್ಗೆ ನಾವು ಸ್ಥಿರತೆ ಖಚಿತಪಡಿಸಿಕೊಳ್ಳುತ್ತೇವೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದರು.

 

Previous Post
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು
Next Post
ಬಜೆಟ್‌ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

Recent News