ಫೇಸ್‌ ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿದೆ

ಫೇಸ್‌ ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿದೆ.

ಬೆಂಗಳೂರು : ಫೇಸ್‌ ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿದೆ.ಫೇಸ್‌ ಬುಕ್‌ ನಲ್ಲಿ ಅವಹೇಳಕಾರಿ ಪೋಸ್ಟ್‌ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.ಪೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕ ಯೋಗೇಂದ್ರ ದೂರು, ಜನಪ್ರತಿನಿದಿಗಳ ವಿಶೇಷ ಕೋರ್ಟ್‌ ಗೆ ಖಾಸಗಿ ದೂರು ಸಲ್ಲಿಸಿದ್ದರು.

ಬೆಳಗಾವಿ : ಶಾಸಕ ರಮೇಶ್‌ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್‌ ಬ್ಯಾಂಕ್‌ ನಿಂದ 439 ಕೋಟಿ ರೂ. ಸಾಲ ಪಡೆದು, ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್‌ ಬ್ಯಾಂಕ್‌ ಮ್ಯಾನೇಜರ್‌ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿತ್ತು.ಸಕ್ಕರೆ ಕಾರ್ಖಾನೆ ಮೇಲೆ ಇಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಈ ಕಾರ್ಖಾನೆಯನ್ನು ರಮೇಶ್‌ ಜಾರಕಿಹೊಳಿ ಪುತ್ರ ಸಂತೋಷ್‌ ಜಾರಕಿಹೊಳಿ ನೋಡಿಕೊಳ್ಳುತ್ತಿದ್ದಾರೆ.

Previous Post
ತೆರಿಗೆ, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೇಸ್ ಪ್ರತಿಭಟನೆ
Next Post
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಗರದಲ್ಲಿ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.

Recent News