Gandhi Jayanthi

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ನಡ್ಡಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಐಬಿ ವೃತ್ತದಲ್ಲಿ ಮೇ.07 ರಂದು ಮಾತನಾಡಿದ್ದ ಜೆಪಿ ನಡ್ಡಾ, ರಾಜ್ಯದಲ್ಲಿ ಬಿಜೆಪಿ ಚುನಾವಣೆ ಸೋತರೆ, ರಾಜ್ಯ ಕೇಂದ್ರದ ಯೋಜನೆಗಳಿಂದ ವಂಚಿತವಾಗುತ್ತದೆ ಎಂದು ಹೇಳಿದ್ದರು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕಿಸಾನ್ ನಿಧಿ ಯಂತಹ ಕೇಂದ್ರ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಿದ್ದರು.

ಈ ವಿಭಾಗದ ಚುನಾವಣಾ ಅಧಿಕಾರಿಗಳು ಹರಪನಹಳ್ಳಿಯ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಡ್ಡಾ ವಿರುದ್ಧ ಪ್ರಕರಣ ದಾಖಲಿಸಿದ್ದರು.

ತಮ್ಮ ವಿರುದ್ಧದ ತನಿಖೆಯನ್ನು ರದ್ದುಗೊಳಿಸಬೇಕು ಎಂದು ನಡ್ಡಾ ಹೈಕೋರ್ಟ್ (High Court )ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

Previous Post
ಟಾಲಿವುಡ್ ಹಿರಿಯ ನಟ ಚಂದ್ರ ಮೋಹನ್ ವಿಧಿವಶ
Next Post
ಉಪಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದ ಸಿಎಂ ಬೊಮ್ಮಾಯಿ

Recent News