ಬಿಹಾರ ಸಿಎಂ ರಾಜೀನಾಮೆ, ಮೈತ್ರಿ ಸರ್ಕಾರ ಪತನ, ಇಂದೇ ಅಧಿಕಾರ ಸ್ವೀಕಾರ

ಬಿಹಾರ ಸಿಎಂ ರಾಜೀನಾಮೆ, ಮೈತ್ರಿ ಸರ್ಕಾರ ಪತನ, ಇಂದೇ ಅಧಿಕಾರ ಸ್ವೀಕಾರ

ಬೆಂಗಳೂರು, ಜನವರಿ 28: ಬಿಹಾರ ರಾಜ್ಯದ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆರ್‌ಜೆಡಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ. ಭಾನುವಾರ ತಮ್ಮ ಬೆಂಬಲಿಗರ ಸಹಿತ ರಾಜ್ಯಪಾಲರ ಬಳಿ ತೆರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಕ್ರಿಯಾಶೀಲರಾಗಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯವಾಗಿದ್ದ ಆರ್‌ಜೆಡಿ ಪಕ್ಷವನ್ನು ತನ್ನ ಸೆಳೆಯುವಲ್ಲಿ ಬಿಜೆಪಿ ನಾಯಕರ ಸಫಲವಾಗಿದ್ದಾರೆ. ಬಿಜೆಪಿ ನಾಯಕರು ಮಾತುಕತೆ ಬಳಿಕ ಅವರು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದರು. ಇಂದೇ ಸಿಎಂ ಆಗಿ ಅಧಿಕಾರ ಸ್ವೀಕಾರ? ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಇಂದೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರದ ಸಾರಥಿಯಾಗಲಿದ್ದಾರೆ. ಈ ಬೆಳವಣಿಗೆ ಮೂಲಕ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಭಾಗವಾದರು. ಕಳೆದ ಒಂಬತ್ತು ವರ್ಷಗಳಲ್ಲಿ ನಿತೀಶ್ ಕುಮಾರ್ ನಾಲ್ಕನೇ ಭಾರಿಗೆ ರಾಜಕೀಯ ಮಗ್ಗಲು ಬದಲಿಸಿದಂಗಾಗಿದೆ. ಕೇಂದ್ರ ಬಿಜೆಪಿ ಮಣಿಸಲು ವಿರೋಧ ಪಕ್ಷಗಳೆಲ್ಲವು ಸೇರಿಕೊಂಡು ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿದ್ದರು. ಅದರಲ್ಲಿ ಆರ್‌ಜೆಡಿ ಸಹ ಒಂದು ಸದಸ್ಯ ಪಕ್ಷವಾಗಿತ್ತು. ಅಲ್ಲಿ ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಗುರುತಿಸಿಕೊಂಡಿತ್ತ. ಇದೀಗ ಬಿಹಾರ ಸಿಎಂ ರಾಜೀನಾಮೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ ಸೃಷ್ಟಿಯಾಗಿದೆ.

Previous Post
“ಎಲ್ಲಾ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿಕೊಡಲು, ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ ಗಣತಿಗೆ ಕರೆ ನೀಡಿದ್ದಾರೆ.
Next Post
9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ನಿತೀಶ್ ಕುಮಾರ್

Recent News