ನಟ ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಮೂವರು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನಟ ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಮೂವರು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು ಜ.8 ನಟ ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಮೂವರು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಚಿತ್ರನಟ ಯಶ್ ಜನ್ಮದಿನದ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದಿದ್ದಾರೆ.

Previous Post
ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Next Post
ರಾಷ್ಟ್ರ ನಿರ್ಮಾಣದಲ್ಲಿ ಅಂಚೆ ಕಛೇರಿಗಳ ಕೊಡುಗೆ ಅಪಾರ: ರಾಜ್ಯಪಾಲರು

Recent News