ಬೆಂಗಳೂರು, ಮೇ 8: ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮೇ.8ರವಗೆ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇಂದು ಹೆಚ್.ಡಿ ರೇವಣ್ಣ ಅವರ ಎಸ್ಐಟಿ ವಶದ ಕಾಲಾವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಎಸ್‌ಐಟಿ ರೇವಣ್ಣ ವಿಚಾರಣೆಗೆ ಸಹಕರಿಸುತ್ತಿಲ್ಲ. ಅಲ್ಲದೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿದ್ದು, ನ್ಯಾಯಾಧೀಶರು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು. ಅವರ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿ, 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಗದ ಕಾರಣ ಅವರನ್ನು ಮೇ 14ರವರೆಗೆನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶದ ಹಿನ್ನಲೆಯಲ್ಲಿ. ಪರಪ್ಪನ ಅಗ್ರಹಾರಕ್ಕೆ ರೇವಣ್ಣ ರವರನ್ನು ಸ್ಥಳಾಂತರಗೊಳಿಸಲಾಯಿತು.
ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಶ್ರೀ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.