ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಗರದಲ್ಲಿ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಗರದಲ್ಲಿ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಗರದಲ್ಲಿ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಹೀಗಾಗಿ ಇನ್ಮುಂದೆ ಭಾರತ್ ಬ್ರಾಂಡ್ ಅಕ್ಕಿ ಕೆಜಿಗೆ ರೂ.29, ತೊಗರಿಬೇಳೆ 60 ರೂ.ಗೆ ಮಾರಾಟವಾಗಲಿದೆ.ಈ ಕಾರ್ಯಕ್ರಮದ ಬಳಿಕ ಮಾತನಾಡಿದಂತ ಅವರು, ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಶೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ ಎಂದರು.ಈ ವರೆಗೆ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಕಡ್ಲೆ ಬೇಳೆ ರೂ. 60 ಪ್ರತಿ ಕೆಜಿ, ಗೋದಿ ಹಿಟ್ಟು ರೂ. 27.50 ಪ್ರತಿ ಕೆ.ಜಿ ಹಾಗೂ ಮೂಂಗ್ ದಾಲ್ ಅನ್ನು ಪ್ರತಿ ಕೆಜಿ ಗೆ ರೂ. 93ರಂತೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಈ ಯೋಜನೆಯ ಮುಂದುವರೆದ ಭಾಗವಾಗಿ ಈ ದಿನ ಭಾರತ ಬ್ರ್ಯಾಂಡ್ ಯೋಜನೆಯಡಿ ಅಕ್ಕಿಯನ್ನು ಪ್ರತಿ ಕೆ.ಜಿಗೆ ರೂ. 29ರಂತೆ ಸರಬರಾಜು ಮಾಡಲು ಹಸಿರು ನಿಶಾನೆ ತೋರಿಸಲಾಗುತ್ತಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ಯೋಜನೆಯನ್ನು ರೂಪಿಸಿದ ಸನ್ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜಿ ಅವರನ್ನು ಹಾಗೂ ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.ಇಂತಹ ಒಂದು ಒಳ್ಳೇಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನನಗೆ ಹೆಮ್ಮೆಯುಂಟಾಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಟ್ಟ ದ ಅಧಿಕಾರಿ ವರ್ಗಕ್ಕೆ ಧನವ್ಯವಾದಗಳನ್ನು ಹೇಳಿದರು.ಚುನಾವಣಾ ಪೂರ್ವದಲ್ಲಿ ಪ್ರತಿ ವ್ಯಕ್ತಿಗೆ 10ಕೆ.ಜಿ ಅಕ್ಕಿಯನ್ನು ಉಚಿತವಾಗಿ ಒದಗಿಸುತ್ತೇನೆ ಎಂದು ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರಕ್ಕೆ ಬಂದಿದೆ. ನಂತರ ಮೋದಿಜಿ ಅವರ ಕೇಂದ್ರ ಸರ್ಕಾರ ನೀಡುತ್ತೀರುವ 5ಕೆ.ಜಿ ಅಕ್ಕಿಯನ್ನು ಹೊರತುಪಡಿಸಿ ಒಂದು ಗ್ರಾಂ ನಷ್ಟು ಅಕ್ಕಿಯನ್ನು ಹೆಚ್ಚುವರಿಯಾಗಿ ಒದಗಿಸಲು ಸಾಧ್ಯವಾಗಲಿಲ್ಲ. ಅಂತಹುದ್ದರಲ್ಲಿ ನಮ್ಮ ಕೇಂದ್ರ ಸರ್ಕಾರ ಬರೀ ಬಾಯಿ ಮಾತಿನಲ್ಲಿ ಭರವಸೆ ನೀಡದೆ ಕಾಲಹರಣ ಮಾಡದೆ ಇಂದು ಪ್ರತಿ ಕೆ.ಜಿ ಗೆ ರೂ.29 ಮಾತ್ರ ಪಡೆದು ಎಲ್ಲರಿಗೂ ಅಕ್ಕಿಯನ್ನು ವಿತರಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

Previous Post
ಫೇಸ್‌ ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿ.ಆರ್.‌ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿದೆ
Next Post
ಇಂದಿನಿಂದ 29 ರೂ.ಗೆ ಸಿಗಲಿದೆ ಭಾರತ್‌ ಅಕ್ಕಿ : ಎಲ್ಲೆಲ್ಲಿ ಮಾರಾಟ?

Recent News