ಮಾತೃ ಭಾಷೆಯಲ್ಲಿ ಸಿಎಪಿಎಫ್ ಪರೀಕ್ಷೆ ಬರೆಯಲು ಅನುಮತಿ

ಮಾತೃ ಭಾಷೆಯಲ್ಲಿ ಸಿಎಪಿಎಫ್ ಪರೀಕ್ಷೆ ಬರೆಯಲು ಅನುಮತಿ

ನವದೆಹಲಿ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಗಳಲ್ಲಿ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಪರೀಕ್ಷೆಯನ್ನು ಇದೆ ಮೊದಲ ಬಾರಿಗೆ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ‌. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20ರಿಂದ ಮಾರ್ಚ್ 7 ರ ವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಗಳ ನೇಮಕಾತಿಗಾಗಿ ಕಾನ್‌ಸ್ಟೇಬಲ್‌ (ಸಾಮಾನ್ಯ ಕರ್ತವ್ಯ) ಪರೀಕ್ಷೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾನ್‌ಸ್ಟೇಬಲ್‌ ಜಿಡಿ ಪರೀಕ್ಷೆಯು ಸಿಬ್ಬಂದಿ ಆಯ್ಕೆ ಆಯೋಗ(ಎಸ್‌ಎಸ್‌ಸಿ) ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ, ಇದು ದೇಶಾದ್ಯಂತ ಲಕ್ಷಾಂತರ ಯುವಕರನ್ನು ಆಕರ್ಷಿಸುತ್ತದೆ. ಆದ್ದರಿಂದ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಮೇಲಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುವಂತೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದೆ.

ಸರ್ಕಾರದ ಈ ನಿರ್ಧಾರವು ಲಕ್ಷಾಂತರ ಯುವಕರು ತಮ್ಮ ಮಾತೃಭಾಷೆ, ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುತ್ತದೆ. ಜೊತೆಗೆ ಅವರಿಗೆ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತದೆ. ಪರಿಣಾಮವಾಗಿ, ಇಡೀ ದೇಶದ ಅಭ್ಯರ್ಥಿಗಳಲ್ಲಿ ಈ ಪರೀಕ್ಷೆಯ ವ್ಯಾಪ್ತಿಯು ಹೆಚ್ಚಾಗುತ್ತದೆ. ಎಲ್ಲರಿಗೂ ಸಮಾನ ಉದ್ಯೋಗ ಅವಕಾಶ ಸಿಗುತ್ತದೆ.

Previous Post
ದೆಹಲಿಗೆ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ ನೂರಕ್ಕೂ ಅಧಿಕ ರೈತರ ಬಂಧನ
Next Post
ಬೆಹುಗಾರಿಗೆ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಒಳಪಟ್ಟಿದ್ದ ನೌಕಾಪಡೆಯ ಮಾಜಿ ಅಧಿಕಾರಿಗಳು ಭಾರತಕ್ಕೆ ವಾಪಸ್

Recent News