ಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ, ಫೆಬ್ರವರಿ 09: ಪ್ರಕರಣವೊಂದರಲ್ಲಿ ತಮಗೆ ನೀಡಿರುವ ಸಮನ್ಸ್ ರದ್ದುಗೊಳಿಸುವಂತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ದ್ವೇಷ ಭಾಷಣದಿಂದ ವ್ಯಕ್ತಿ ಅಥವಾ ಗುಂಪಿನ ಮೇಲಿನ ಮಾನಸಿಕ ಪ್ರಭಾವವನ್ನೂ ಇದರಲ್ಲಿ ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟಿದೆ. 2022 ರ ಸಂದರ್ಶನದಲ್ಲಿ ಅಂತಾರಾಷ್ಟ್ರೀಯ ಕ್ರಿಶ್ಚಿಯನ್ ಮಿಷನರಿ ಎನ್‌ಜಿಒ ಪಟಾಕಿ ಸಿಡಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಬಾಲಕನಿಗೆ ಬೆಂಬಲ ನೀಡಿದೆ ಎಂಬ ಆರೋಪ ಮಾಡಿದ್ದರು. ಇದಾದ ಬಳಿಕ ತಮಿಳುನಾಡು ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಸೇಲಂನಲ್ಲಿ ಮ್ಯಾಜಿಸ್ಟ್ರೇಟ್ ಸಮನ್ಸ್ ಜಾರಿ ಮಾಡಿದ್ದಾರೆ. ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ಕೆ. ಅಣ್ಣಾಮಲೈ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ದ್ವೇಷ ಭಾಷಣದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.

ಅಣ್ಣಾಮಲೈ ಪ್ರಕರಣವೇನು? ಅಕ್ಟೋಬರ್ 22, 2022 ರಂದು ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ ಕ್ರಿಶ್ಚಿಯನ್ನರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಅದು ದೀಪಾವಳಿ ಮೊದಲು ಪಟಾಕಿ ಸಿಡಿಸುವಿಕೆಗೆ ಸಂಬಂಧಿಸಿದಂತೆ ಎಂದು ಆರೋಪಿಸಿ ವಿ ಪಿಯೂಷ್ ಎಂಬ ವ್ಯಕ್ತಿ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಸಮನ್ಸ್ ನೀಡಲಾಗಿದೆ.

ಸಂದರ್ಶನವು ಸುಮಾರು 40 ನಿಮಿಷಗಳ ಅವಧಿಯದ್ದಾಗಿದ್ದರೂ, ಕ್ರಿಶ್ಚಿಯನ್ ಎನ್‌ಜಿಒ ಬಗ್ಗೆ ಅವರ ದ್ವೇಷ ಪೂರಿತ ಭಾಷಣದ 6.5 ನಿಮಿಷಗಳ ಸಣ್ಣ ಕ್ಲಿಪ್ ಅನ್ನು ಅಕ್ಟೋಬರ್ 22, 2022 ರಂದು ಬಿಜೆಪಿ ತಮಿಳುನಾಡು ಘಟಕದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದು ದೀಪಾವಳಿ ಹಬ್ಬಕ್ಕೆ ಕೇವಲ ಎರಡು ದಿನಗಳಿರುವಾಗ. ಹೀಗಾಗಿ ಇದರ ಹಿಂದಿನ ಉದ್ದೇಶ ಅರ್ಥವಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಹಿಂದೂಗಳು ಪಟಾಕಿ ಸಿಡಿಸುವುದನ್ನು ತಡೆಯಲು ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಮೂಲಕ ಹಿಂದೂ ಸಂಸ್ಕೃತಿಯನ್ನು ಸಂಪೂರ್ಣವಾಗಿ ನಾಶಮಾಡುವಲ್ಲಿ ತೊಡಗಿಸಿಕೊಂಡಿರುವ ಅಂತರರಾಷ್ಟ್ರೀಯ ಅನುದಾನಿತ ಕ್ರಿಶ್ಚಿಯನ್ ಮಿಷನರಿ ಎನ್‌ಜಿಒ ಇದೆ ಎಂಬ ಅಂಶವನ್ನು ಈ ಸಂದರ್ಶನ ಕ್ಲಿಪ್ ವಿಷಯವಾಗಿದೆ. ಮೇಲ್ನೋಟಕ್ಕೆ, ಕ್ರಿಶ್ಚಿಯನ್ ಎನ್‌ಜಿಒ ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಂಬಿಸಲು ಅರ್ಜಿದಾರರ ಕಡೆಯಿಂದ ಬಂದ ಹೇಳಿಕೆಗಳು ಬಹಿರಂಗಪಡಿಸುತ್ತವೆ ಎಂದು ನ್ಯಾಯಾಧೀಶರು ಹೇಳಿದರು. ದೀಪಾವಳಿ ಹಬ್ಬಕ್ಕೆ ಎರಡು ದಿನಗಳ ಮೊದಲು ಮಾಡಿದ ಹೇಳಿಕೆಗಳ ಸಮಯದಿಂದ ಈ ಉದ್ದೇಶವನ್ನು ಊಹಿಸಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಮತ್ತು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಪ್ರಸ್ತುತ ಅಧ್ಯಕ್ಷರಾಗಿರುವ ಅರ್ಜಿದಾರರು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವ ನಿರೀಕ್ಷೆಯಿದೆ ಎಂದು ನ್ಯಾಯಮೂರ್ತಿ ವೆಂಕಟೇಶ್ ಹೇಳಿದ್ದಾರೆ. ಇದಲ್ಲದೆ, ತಾವೊಬ್ಬ ನಾಯಕ ಮತ್ತು ಸಮಾಜ ಮೇಲೆ ಪ್ರಭಾವ ಬೀರುವವರಾಗಿದ್ದೂ, ಅವರ ಹೇಳಿಕೆಗಳು ಜನರ ಮೇಲೆ, ವಿಶೇಷವಾಗಿ ಹಿಂದೂ ಧರ್ಮಕ್ಕೆ ಸೇರಿದವರ ಮೇಲೆ ವ್ಯಾಪಕವಾದ ಪ್ರಭಾವ ಬೀರುತ್ತವೆ ಎಂಬುದನ್ನು ತಿಳಿದೂ ಕೂಡ ಇಂತಹ ಹೇಳಿಕೆ ನೀಡಿದ್ದಾರೆ ಎಂಬುದನ್ನು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ. ಅಣ್ಣಾಮಲೈ ಅವರ ಭಾಷಣದ ಗುರಿ ಒಂದು ನಿರ್ದಿಷ್ಟ ಧಾರ್ಮಿಕ ಗುಂಪಾಗಿದ್ದು, ಅಲ್ಪಸಂಖ್ಯಾತ ಧಾರ್ಮಿಕ ಗುಂಪು ಬಹುಸಂಖ್ಯಾತ ಧಾರ್ಮಿಕ ಗುಂಪಿನ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಲು ಹೊರಟಿದ್ದಾರೆ. ಒಂದು ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷವನ್ನು ಹುಟ್ಟುಹಾಕುವ ಪ್ರಾಥಮಿಕ ಉದ್ದೇಶವು ಇದರಲ್ಲಿದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ ನ್ಯಾಯಾಧೀಶರು.

Previous Post
ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ; ಸೂಕ್ತ ಕ್ರಮವಹಿಸಲು ಡಿಜಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Next Post
6 ಮಂದಿ ಸಾವು, 250 ಜನರಿಗೆ ಗಾಯ- ಕರ್ಫ್ಯೂ ಜಾರಿ, ಶಾಲೆಗಳು ಬಂದ್!

Recent News