ಮುಂದಿನ 7 ದಿನದಲ್ಲಿ ‘ಸಿಎಎ’ ಜಾರಿ: ಕೇಂದ್ರ ಸರ್ಕಾರ

ಮುಂದಿನ 7 ದಿನದಲ್ಲಿ ‘ಸಿಎಎ’ ಜಾರಿ: ಕೇಂದ್ರ ಸರ್ಕಾರ

ನವದೆಹಲಿ, ಜನವರಿ 29: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಯಾಗಿದೆ. ಇದೀಗ ಕೇಂದ್ರ ಸರ್ಕಾರ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ (CAA) ಜಾರಿಗೆ ತರಲು ಮುಂದಾಗಿದೆ. ಈ ಕುರಿತು ಕೇಂದ್ರ ಸಚಿವ ಶಾಂತನು ಠಾಕೂರ್ ಮಾಹಿತಿ ನೀಡಿದ್ದಾರೆ. ಭಾನುವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಜಾರಿಗೆ ಬರಲಿದೆ. ಇದು ಕೇಂದ್ರ ಸರ್ಕಾರದ ಗ್ಯಾರಂಟಿಯಾಗಿದೆ. ಕೇವಲ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎ ಒಂದು ವಾರದೊಳಗೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ 2014ರ ಅಂತ್ಯದವರೆಗೆ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ಈ ಸಿಎಎ ಕಾಯ್ದೆಯಡಿ ನೀಡಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ತಿರ್ಮಾನಿಸಿದೆ. ಸಿಎಎ ಜಾರಿ ಬಿಜೆಪಿಯ ಬದ್ಧತೆ: ಅಮಿತ್ ಷಾ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಇತ್ತೀಚೆಗೆ ಅಮಿಷತ್ ಶಾ ಸಹಿತ ಮಾತನಾಡಿದ್ದರು. ಈ ಕಾಯ್ದೆಯನ್ನು 2019ರ ಡಿಸೆಂಬರ್ ನಲ್ಲಿ ಸಿಎಎ ಸಂಸತ್ತು ಅಂಗೀಕರಿಸಿದ ನಂತರ ಮತ್ತು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ನಂತರ ದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಕಾಯ್ದೆ ಜಾರಿಗೆ ವಿರೋಧ ವ್ಯಕ್ತವಾದವು. 2023ರ ಡಿಸೆಂಬರ್ 27 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಭಾರತದ ಕಾನೂನು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದರು.

ಸಿಎಎ ಜಾರಿಗೆ ‘ದಿದಿ’ ವಿರೋಧ ಕೋಲ್ಕತ್ತಾದಲ್ಲಿ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಿಎಎ ಜಾರಿಗೊಳಿಸುವುದು ಬಿಜೆಪಿಯ ಬದ್ಧತೆಯಾಗಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸಿಎಎಯನ್ನು ವಿರೋಧಿಸುತ್ತಿದ್ದಾರೆ. ವಿವಾದಾತ್ಮಕ ಸಿಎಎ ಜಾರಿಗೆ ತರುವ ಭರವಸೆಯು ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಯೋಜನೆಯಾಗಿತ್ತು. ಇದು ರಾಜ್ಯದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ತೋರಿಕೆಯ ಅಂಶ ಎಂದು ಬಿಜೆಪಿ ನಾಯಕರು ಪರಿಗಣಿಸಿದ್ದಾರೆ.

2020ರಿಂದ, ಗೃಹ ಸಚಿವಾಲಯವು ಸಿಎಎ ನಿಯಮಗಳ ರಚನೆಗಾಗಿ ಸಂಸದೀಯ ಸಮಿತಿಗಳಿಂದ ನಿಯಮಿತ ಅವಧಿಗಳನ್ನು ವಿಸ್ತರಣೆಗೆ ಪಡೆದುಕೊಂಡಿತು. ಸಂಸತ್ತು ಕಾನೂನನ್ನು ಅಂಗೀಕರಿಸಿದ ನಂತರ ಪ್ರತಿಭಟನೆಗಳು ಅಥವಾ ಪೊಲೀಸ್ ಕ್ರಮದ ಸಮಯದಲ್ಲಿ ನೂರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಪೌರತ್ವ ನೀಡುವ ಅಧಿಕಾರ ನೀಡಲಾಗಿದೆ ನಿಗದಿತ ದೇಶಗಳಿಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ ಅಧಿಕಾರವನ್ನು ಕೇಂದ್ರ ಸರ್ಕಾರ ಒಂಬತ್ತು ರಾಜ್ಯಗಳ 30ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ನೀಡಿದೆ. ಸೂಕ್ಷ್ಮ ರಾಜ್ಯಗಳಾಗಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಯಾವುದೇ ಜಿಲ್ಲೆಗಳ ಅಧಿಕಾರಿಗಳಿಗೆ ಇದುವರೆಗೆ ಈ ಅಧಿಕಾರ ನೀಡಲಾಗಿಲ್ಲ. 2021-22ರಲ್ಲಿ ಬಿಡುಗಡೆಯಾದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿ ನೋಡುವುದಾದರೆ, 2021ರ ಏಪ್ರಿಲ್ 1 ರಿಂದ 2021ರ ಡಿಸೆಂಬರ್ 31 ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಭಾರತೀಯರನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

Previous Post
ಕೆಎಲ್ ರಾಹುಲ್, ಜಡೇಜಾ ತಂಡದಿಂದ ಹೊರಕ್ಕೆ: ಸರ್ಫರಾಜ್‌ ಖಾನ್‌, ಮತ್ತಿಬ್ಬರಿಗೆ ಅವಕಾಶ
Next Post
ಮೋಹಲ್ಲಾಗಳಿಗೆ ರೂ.1,000 ಕೋಟಿ: ಈ ವಿಚಾರದಲ್ಲಿ ಸಿಎಂ-ಡಿಸಿಎಂ ಮಧ್ಯೆ ಪೈಪೋಟಿ?

Recent News