ಮುಖ್ಯಮಂತ್ರಿ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿ ೧೦ ಸಾವಿರ ರೂ. ದಂಡ ವಿಧಿಸಿದೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿ ೧೦ ಸಾವಿರ ರೂ. ದಂಡ ವಿಧಿಸಿದೆ

ಬೆಂಗಳೂರು, ಫೆ. ೬– ಪ್ರತಿಭಟನೆ ಸಂದರ್ಭದಲ್ಲಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ತಮ್ಮ ವಿರುದ್ಧ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿ ೧೦ ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಸೇರಿದಂತೆ ಹಲ ಕಾಂಗ್ರೆಸ್ ನಾಯಕರು ೨೦೨೨, ಏಪ್ರಿಲ್ ೧೪ ರಂದು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೆಸ್‌ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಲಾಗಿದೆ. ಸಿದ್ಧರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸುರ್ಜೇವಾಲ, ರಾಮಲಿಂಗಾರೆಡ್ಡಿ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಸಿದ್ಧರಾಮಯ್ಯ ವಿರುದ್ಧ ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿಯನ್ನು ವಜಾ ಮಾಡಿದೆ. ಅಲ್ಲದೆ ಮಾರ್ಚ್ ೬ ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗುವಂತೆ ಸಿದ್ಧರಾಮಯ್ಯ ಅವರಿಗೆ ನ್ಯಾಯಾಲಯ ಸೂಚಿಸಿದೆ.
ಮಾ. ೭ ರಂದು ರಾಮಲಿಂಗಾರೆಡ್ಡಿ. ಮಾ. ೧೧ ರಂದು ರಣದೀಪ್ ಸಿಂಗ್ ಸುರ್ಜೇವಾಲ ಮಾ. ೧೫ ರಂದು ಎಂ.ಬಿ. ಪಾಟೀಲ್ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಅನಗತ್ಯವಾಗಿ ಪಿಎಸ್‌ಐ ಕು. ಜಹೀದಾ ಅವರನ್ನು ಸಿದ್ಧರಾಮಯ್ಯ ಪ್ರತಿವಾದಿಯಾಗಿಸಿದ್ದರು. ಇದಕ್ಕಾಗಿ ಸಿದ್ಧರಾಮಯ್ಯ ನಾಲ್ವರು ನಾಯಕರಿಗೆ ತಲಾ ೧೦ ಸಾವಿರ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. ಈ ದಂಡದ ಆ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಿಕೊಳ್ಳುವಂತೆ ನ್ಯಾಯಾಲಯ ಸೂಚಿಸಿದೆ
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ಕೊಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಪ್ರಕರಣ ದಾಖಲಾಗುತ್ತದ ಅದರಂತೆ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು

Previous Post
ಜನಾರ್ದನ ಪೂಜಾರಿ – ಈಶ್ವರ ಖಂಡ್ರೆ ಭೇಟಿ
Next Post
ಬಿಜೆಪಿ ನಿಯೋಗವು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿತು.

Recent News