ಮೈತ್ರಿಕೂಟದಲ್ಲಿ ಬಿರುಕು; ಪಂಜಾಬ್‌ನಲ್ಲಿ ಮೈತ್ರಿ ಇಲ್ಲ ಎಂದ ಎಎಪಿ!

ಮೈತ್ರಿಕೂಟದಲ್ಲಿ ಬಿರುಕು; ಪಂಜಾಬ್‌ನಲ್ಲಿ ಮೈತ್ರಿ ಇಲ್ಲ ಎಂದ ಎಎಪಿ!

ಬೆಂಗಳೂರು, ಜನವರಿ 24: ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆ ವೇಳೆಯಲ್ಲಿ ಭಾರೀ ಹಿನ್ನಡೆಯಾಗಿದೆ. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಎಎಪಿ ಪಕ್ಷ ಪಂಜಾಬ್‌ನಲ್ಲಿ ಮೈತ್ರಿ ಇಲ್ಲ ಎಂದು ಘೋಷಣೆ ಮಾಡಿದೆ. ಬುಧವಾರ ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಈ ಕುರಿತು ಘೋಷಣೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದ್ದರೂ ಸಹ ಪಂಜಾಬ್‌ನ ಎಲ್ಲಾ ಲೋಸಕಭಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಎಎಪಿ ಹೇಳಿದೆ.

ಪಂಜಾಬ್ ರಾಜ್ಯದಲ್ಲಿ 13 ಲೋಕಸಭಾ ಕ್ಷೇತ್ರಗಳಿವೆ. ಎಎಪಿ ಪಕ್ಷ ರಾಜ್ಯದಲ್ಲಿ ಚುನಾವಣೆ ಕಣಕ್ಕಿಳಿಸಲು 40 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. “ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮೊದಲು ಸಮೀಕ್ಷೆಯನ್ನು ನಡೆಸುತ್ತೇವೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಎರಡು ಪಕ್ಷಗಳ ಈ ಘೋಷಣೆ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಲ್ಲ ಎಂಬ ಸಂದೇಶ ಸಾರಿದೆ. ಮಮತಾ ಬ್ಯಾನರ್ಜಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಎಪಿ ಪಕ್ಷ ದೆಹಲಿ, ಪಂಜಾಬ್ ಎರಡು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿದೆ. ಈ ಎರಡೂ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷಗಳು. ಆದರೆ ರಾಜ್ಯಗಳಲ್ಲಿ ಮೈತ್ರಿ ಇಲ್ಲ ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಟಿಎಂಟಿ, ಎಎಪಿ, ಸಮಾಜವಾದಿ ಪಕ್ಷ ಮುಂತಾದ ಪಕ್ಷಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ನೀಡಬೇಕು ಎಂದು ‘ಇಂಡಿಯಾ’ ಮೈತ್ರಿಕೂಟದಲ್ಲಿ ಸಭೆಯಲ್ಲಿ ಮೊದಲಿನಿಂದಲೂ ಬೇಡಿಕೆ ಇಟ್ಟಿದ್ದವು. ಪಶ್ಚಿಮ ಬಂಗಾಳ ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ, ಪಂಜಾಬ್‌ನಲ್ಲಿ ಎಎಪಿ ಮತ್ತು ಕಾಂಗ್ರೆಸ್‌ ವಿರೋಧಿಗಳು. ಆದರೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಎದುರಿಸಲು ಮಾಡಿಕೊಂಡಿರುವ ಮೈತ್ರಿಕೂಟದಲ್ಲಿ ಎಲ್ಲಾ ಪಕ್ಷಗಳು ಪಾಲುದಾರರು. ಪಶ್ಚಿಮ ಬಂಗಾಳದಲ್ಲಿ ಅಧೀರ್ ರಂಜಾನ್ ಚೌಧರಿ ಮತ್ತು ಪಂಜಾಬ್‌ನಲ್ಲಿ ಅಮರಿಂದರ್ ರಾಜಾ ಸಿಂಗ್ ರಾಜ್ಯ ಮಟ್ಟದಲ್ಲಿ ಪಕ್ಷದ ಜೊತೆ ಮೈತ್ರಿ ಬೇಡ ಎಂದು ಹೇಳುತ್ತಿದ್ದರು. ಇಂತಹ ಸಮಯದಲ್ಲಿಯೇ ಎರಡು ಪಕ್ಷಗಳು ಈ ಘೋಷಣೆ ಮಾಡಿವೆ. ಕೆಲವು ದಿನಗಳ ಹಿಂದೆ ಪಂಜಾಬ್‌ ಎಎಪಿ ರಾಜ್ಯ ಘಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮೈತ್ರಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವುದೇ ಸಂದೇಶ ಬಂದಿಲ್ಲ. 13 ಕ್ಷೇತ್ರಗಳಲ್ಲಿಯೂ ನಾವು ಸ್ಪರ್ಧಿಸುತ್ತೇವೆ ಎಂದು ಹೇಳಿತ್ತು. ಪಾಟ್ನಾದಲ್ಲಿ 2023ರ ಜೂನ್‌ನಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಮೊದಲ ಸಭೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವೆ ವಾಗ್ವಾದ ನಡೆದಿತ್ತು. 2ನೇ ಸಭೆಯಲ್ಲಿ ತಾನು ಪಾಲ್ಗೊಳ್ಳುವುದಿಲ್ಲ ಎಂದು ಎಎಪಿ ನಾಯಕರು ಸಭೆಯಿಂದ ಹೊರ ಹೋಗಿದ್ದರು. ದೆಹಲಿಯ ಸುಗ್ರೀವಾಜ್ಞೆ ಮಸೂದೆಗೆ ರಾಜ್ಯಸಭೆಯಲ್ಲಿ ಎಎಪಿಗೆ ಬೆಂಬ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವೆ ಜಟಾಪಟಿ ನಡೆದಿತ್ತು. ಈ ವಿಚಾರದಲ್ಲಿ ಇನ್ನೂ ಸಹ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಿಲ್ಲ.

Previous Post
“ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌
Next Post
TMC ಏಕಾಂಗಿ ಸ್ಪರ್ಧೆ: ಮಮತಾ ಘೋಷಣೆ

Recent News