ರಾಜ್ಯಸಭೆಗೆ ದೆಹಲಿಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ಲಾಬಿ

ರಾಜ್ಯಸಭೆಗೆ ದೆಹಲಿಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ಲಾಬಿ

ನವದೆಹಲಿ : ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ ಸೋಮಣ್ಣ ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ‌.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ.

ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂರು ಸ್ಥಾನಗಳು ಕಾಂಗ್ರೇಸ್‌ಗೆ ಲಭ್ಯವಾಗಲಿದ್ದು ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಅವಕಾಶ ಇದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೊಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ, ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ, ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ, ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ. ಸೋಮಣ್ಣ ತುಮಕೂರು ಕ್ಷೇತ್ರಕ್ಕೆ ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ ಅಭಿಲಾಷೆ ಸ್ಥಳಿಯ ನಾಯಕರು ಬೆಂಬಲ ನೀಡುತ್ತಿದ್ದಾರೆ ಅಂತಿಮವಾಗಿ ಎಲ್ಲವೂ ಹೈಕಮಾಂಡ್ ನಿರ್ಧರ ಮಾಡಲಿದೆ ಕೊಟ್ಟರೆ ಜವಬ್ಧಾರಿ ನಿಭಾಯಿಸುತ್ತೇನೆ, ಇಲ್ಲ ಪಕ್ಷದ ಕೆಲಸ‌ ಮಾಡುತ್ತೇನೆ ಎಂದರು.

ಸುಧಾರಕರ್ ಗೆ ಚಿಕ್ಕಬಳ್ಳಾಪುರದಿಂದ ಭರವಸೆ ನೀಡಿದ್ದಾರ ಇಲ್ವ ಗೊತ್ತಿಲ್ಲ ಅದರ ಮಾಹಿತಿ ಇಲ್ಲ, ಆ ಬಗ್ಗೆ ಮಾತನಾಡಲ್ಲ
ಸುಮಲತಾ ಸ್ಪರ್ಧೆ ಹೈಕಮಾಂಡ್ ನಿರ್ಧರ ಮಾಡಲಿದೆ. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪಕ್ಷ ಬೇರೆ ಇರಬಹುದು, ಆದರೆ ನಾವು ಮೊದಲಿನಿಂದ ಪರಿಚಯ, ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ, ಅವರು 2 ಬಾರಿ ಮುಖ್ಯಮಂತ್ರಿಯಾದವರು ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ ಅಷ್ಟೇ, ನಾವು ಇವತ್ತು ಹಿಂಗೇ ಮಾತಾಡೋಕೆ ದೇವೇಗೌಡರು ಕಾರಣ, ಅವರ ಒಡನಾಟ, ಅವರು ಕೊಟ್ಟಿರುವ ಅನುಭವ ಮಹತ್ವವಾಗಿದ್ದು ಎಂದರು.

Previous Post
ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ, ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಸ್ಪಷ್ಟನೆ
Next Post
ಯುಸಿಸಿ ಕರಡು ಪ್ರತಿಗೆ ಸಂಪುಟದಿಂದ ಹಸಿರು ನಿಶಾನೆ

Recent News