ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಿರಿಯ ನಾಯಕರ ಮೇಲೆ ಕಾಂಗ್ರೆಸ್ ಒತ್ತಡ!

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಿರಿಯ ನಾಯಕರ ಮೇಲೆ ಕಾಂಗ್ರೆಸ್ ಒತ್ತಡ!

ನವದೆಹಲಿ, ಫೆಬ್ರವರಿ 01: ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಹಠದಲ್ಲಿರು ಕಾಂಗ್ರೆಸ್ ಹಲವು ಕಸರತ್ತುಗಳನ್ನು ನಡೆಸುತ್ತಿದೆ. ರಾಜ್ಯದಲ್ಲಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಫೆಬ್ರವರಿ ಅಂತ್ಯದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾರ್ಧಯತೆಯಿದೆ. ಇದರ ಬೆನ್ನಲ್ಲೆ ಹಲವು ಭಾಗಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೊಸ ಪ್ರಯೋಗ ಮಾಡುತ್ತಿದೆ. ಇನ್ನೇನು ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಈ ವೇಳೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಘೇಲ್ ಸೇರಿದಂತೆ ಹಿರಿಯ ನಾಯಕರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಕೇಳಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣೆಯ ನಾಯಕತ್ವ ವಹಿಸಿಕೊಳ್ಳುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದು ವರದಿಯಾಗಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ, ಪಂಜಾಬ್, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಒಂಬತ್ತು ಉತ್ತರದ ರಾಜ್ಯಗಳ 184 ಸ್ಥಾನಗಳಲ್ಲಿ ಅದು ಕೇವಲ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಹೀಗಾಗಿ ಈ ರಾಜ್ಯಗಳತ್ತ ಕಾಂಗ್ರೆಸ್ ಹೆಚ್ಚು ಗಮನ ಹರಿಸಿದೆ. ಮೂಲಗಳ ಪ್ರಕಾರ ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಸ್ಪೀಕರ್ ಸಿ.ಪಿ. ಜೋಶಿ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಸೇರಿದಂತೆ ಎಲ್ಲಾ ಹಿರಿಯ ನಾಯಕರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

“ಕಳೆದ ಬಾರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಜೋಧಪುರದಿಂದ ಸ್ಪರ್ಧಿಸಿ 2.74 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ಸತತ ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲದ ಅವಮಾನವನ್ನು ತೊಡೆದುಹಾಕಲು ಮಗನ ಬದಲು ತಂದೆ ಸ್ಪರ್ಧಿಸಲು ನಾವು ಬಯಸುತ್ತೇವೆ” ಎಂದು ಹೇಳಿದ್ದಾರೆ. ಹೀಗಾಗಿ ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಮೇಲೆ ಸ್ಪರ್ಧೆಗೆ ಒತ್ತಡೆ ಹೆಚ್ಚಾಗುತ್ತಿದೆ.

ಛತ್ತೀಸ್‌ಗಢದಲ್ಲಿಯೂ ಹಿರಿಯ ನಾಯಕರ ಮೇಲೆ ಒತ್ತಡ ಛತ್ತೀಸ್‌ಗಢದಲ್ಲಿಯೂ ಹಿರಿಯ ನಾಯಕರ ಮೇಲೆ ಇದೇ ರೀತಿಯ ಒತ್ತಡ ಇದೆ. ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸ್ಪರ್ಧಿಸಬೇಕು ಎಂಬ ಒತ್ತಡವಿದೆ. ಆದರೆ ಮೂಲಗಳ ಪ್ರಕಾರ, ಭೂಪೇಶ್ ಬಘೇಲ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಅವರನ್ನು ಒಂದೇ ಸ್ಥಾನಕ್ಕೆ ಇಳಿಸಬಹುದು. ಜೊತೆಗೆ ರಾಜ್ಯ ಮತ್ತು ದೇಶಾದ್ಯಂತ ಪಕ್ಷದ ಪ್ರಚಾರದಿಂದ ಅವರನ್ನು ತಡೆಹಿಡಿಯಬಹುದು ಎಂಬ ಆತಂಕ ಅವರಲ್ಲಿದೆ ಎನ್ನಲಾಗಿದೆ. “ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಒತ್ತಡ ಹೇರದ ಹೊರತು, ಅವರು ತಮ್ಮ ಮನಸ್ಸನ್ನು ಬದಲಾಯಿಸುವ ಸಾಧ್ಯತೆಯಿಲ್ಲ” ಎನ್ನುತ್ತವೆ ಮೂಲಗಳು. ಹರಿಯಾಣದಲ್ಲಿ, ರಾಜ್ಯಸಭಾ ಸಂಸದ ದೀಪೇಂದರ್ ಹೂಡಾ ಅವರು ಮೂರು ಬಾರಿ ಪ್ರತಿನಿಧಿಸಿದ್ದ ರೋಹ್ಟಕ್‌ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರು 2019 ರಲ್ಲಿ ಈ ಕ್ಷೇತ್ರದಿಂದ 7,500 ಮತಗಳ ಅಂತರದಿಂದ ಸೋತಿದ್ದಾರೆ. ಆದರೆ, ಇದುವರೆಗೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಉತ್ತರ ಪ್ರದೇಶದಲ್ಲಿ, ಇದುವರೆಗೆ 11 ಸ್ಥಾನಗಳನ್ನು ಬಿಟ್ಟುಕೊಟ್ಟಿರುವ ಸಮಾಜವಾದಿ ಪಕ್ಷವು, ಹಿರಿಯ ನಾಯಕರನ್ನು ಕಣಕ್ಕಿಳಿಸಿದರೆ, ಅವರ ಪಾಲನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಕಾಂಗ್ರೆಸ್‌ಗೆ ಸ್ಪಷ್ಟಪಡಿಸಿದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷವು ತನ್ನ ಕ್ಯಾಬಿನೆಟ್ ಮಂತ್ರಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸಲು ಪ್ರಯತ್ನಿಸುತ್ತಿದೆ. ಇನ್ನು, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯಿಂದ ನಿವೃತ್ತಿ ಹೊಂದುತ್ತಾರೆ ಮತ್ತು ರಾಜ್ಯಸಭೆ ಮೂಲಕ ಸಂಸತ್ತಿಗೆ ಪ್ರವೇಶಿಸುತ್ತಾರೆ ಎಂಬ ಊಹಾಪೋಹವಿದೆ. ಇದರ ನಡುವೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯದಿಂದ ಲೋಕಸಭೆಗೆ ಹೋಗುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.

Previous Post
15 ಮಾಜಿ ಶಾಸಕರು ಬಿಜೆಪಿ ಸೇರ್ಪಡೆ
Next Post
ವಿಧಾನಸೌಧದಕ್ಕೆ ಬೀಗ ಹಾಕಲು ಮುಂದಾದ ಬಿಜೆಪಿ ನಾಯಕರು: ವಿಜಯೇಂದ್ರ ವಶಕ್ಕೆ ಪಡೆದ ಪೊಲೀಸರು

Recent News