ಲೋಕಸಭೆ ಟಿಕೇಟ್‌ಗಾಗಿ ಸೋಮಣ್ಣ ಲಾಬಿ – ಇಂದು ಅಮಿತ್ ಶಾ ಭೇಟಿ

ಲೋಕಸಭೆ ಟಿಕೇಟ್‌ಗಾಗಿ ಸೋಮಣ್ಣ ಲಾಬಿ – ಇಂದು ಅಮಿತ್ ಶಾ ಭೇಟಿ

ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಸೋಲು ಕಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದು ಈ ಸಂಬಂಧ ಹೈಕಮಾಂಡ್ ಚರ್ಚಿಸಲು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ನಾಳೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗುವ ಸಾಧ್ಯತೆಗಳಿದೆ.

ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದ ವಿ.ಸೋಮಣ್ಣ ಮಂಗಳವಾರ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ‌. ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶ ಪೂರ್ವಕವಾಗಿ ಸೋಲಿಸುವ ಯತ್ನ ಆಗಿದೆ. ಕುತಂತ್ರದ ಕಾರಣಗಳಿಂದ ನಾನು ಸೋಲು ಕಂಡಿದ್ದೇನೆ ಹೀಗಾಗೀ ಮುಂಬರುವ ಚುನಾವಣೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ಕೊಡಿಸಲು ಸಂಸದ ಬಸವರಾಜ್ ಪ್ರಯತ್ನ ಮಾಡುತ್ತಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿರುವ ಸಂಸದ ಬಸವರಾಜು ಸೋಮಣ್ಣ ಪರ ಬ್ಯಾಟ್ ಬೀಸುತ್ತಿದ್ದಾರೆ. ತಮ್ಮ‌ ಬದಲಿಗೆ ವಿ.ಸೋಮಣ್ಣ ಅವರಿಗೆ ಟಿಕೇಟ್ ನೀಡುವಂತೆ ಅಮಿತ್ ಶಾ ಅವರಿಗೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

Previous Post
ಗೋವಾದಲ್ಲಿ ನಾಲ್ಕು ವರ್ಷದ ಮಗನನ್ನೇ ಹತ್ಯೆಗೈದ ಮಹಿಳೆ
Next Post
ಮ್ಯಾನ್ಮಾರ್‌ನಲ್ಲಿರುವ ಉಗ್ರರ ಶಿಬಿರದ ಮೇಲೆ ಭಾರತದಿಂದ ಬಾಂಬ್‌ ದಾಳಿ?

Recent News