ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ

ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ

ನವದೆಹಲಿ, ಜ. 16: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ. ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ಯಾವುದೇ ಸಮೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ‘ಹೈಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ಆದರೆ, ಕಮಿಷನರ್ ನೇಮಕಕ್ಕೆ ಮಧ್ಯಂತರ ತಡೆ ನೀಡಲಾಗುವುದು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಕಳೆದ ತಿಂಗಳು ನೀಡಿದ್ದ ಅನುಮತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಇದೀಗ ತಡೆ ನೀಡಿದೆ. ಈದ್ಗಾ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟಿನಲ್ಲಿ ಹತ್ತಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆ ಪ್ರದೇಶದಲ್ಲಿ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ ಎಂದು ಕೆಲವರು ಪ್ರತಿಪಾದಿಸಿದ್ದಾರೆ.

Previous Post
ಯುಎಸ್ ಅಧ್ಯಕ್ಷೀಯ ರೇಸ್‌ನಿಂದ ವಿವೇಕ್ ರಾಮಸ್ವಾಮಿ ಔಟ್
Next Post
ಭಗವಂತ್ ಮಾನ್​ ಕೊಲ್ಲುವುದಾಗಿ​ ಪನ್ನು ಬೆದರಿಕೆ

Recent News