ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ತೀವ್ರ ಅನ್ಯಾಯ: ಖರ್ಗೆ ಪತ್ರ

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ತೀವ್ರ ಅನ್ಯಾಯ: ಖರ್ಗೆ ಪತ್ರ

ನವದೆಹಲಿ, ಫೆ. 26: ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ‘ಘೋರ ಅನ್ಯಾಯ’ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಕೂಡ ಆಗಿದ್ದಾರೆ. ಈ ಯುವಕರು ತಮ್ಮ ಕನಸಗಳ ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು ‘ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು’ ಎಂದು ಖರ್ಗೆ ತಿಳಿಸಿದ್ದಾರೆ.

‘ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆ ಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅವರಲ್ಲಿ ಶೇ 25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ.

Previous Post
3 ದಿನಕ್ಕೆ 25 ಕೋಟಿ ರೂ. ಗಳಿಸಿದ ‘ಆರ್ಟಿಕಲ್ 370’ ಸಿನಿಮಾ
Next Post
ರಾಹುಲ್ ಗಾಂಧಿ, ತರೂರ್ ಕ್ಷೇತ್ರಗಳಿಗೆ ಸಿಪಿಐ ಅಭ್ಯರ್ಥಿಗಳ ಘೋಷಣೆ

Recent News