ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಜೆಡಿಯು ಒತ್ತಾಯ

ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಜೆಡಿಯು ಒತ್ತಾಯ

ನವದೆಹಲಿ, ಜೂ. 6: ಮೋದಿ ನೇತೃತ್ವದ ಎನ್‌ಡಿಎ ಸರಕಾರ ಈ ಹಿಂದೆ ಜಾರಿಗೆ ತಂದಿದ್ದ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ಮಾಡುವಂತೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ನಾಯಕ ಕೆ.ಸಿ.ತ್ಯಾಗಿ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯು ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಜನತಾ ದಳ (ಯುನೈಟೆಡ್) ನಂಬುತ್ತದೆ. ಈ ಯೋಜನೆಯಡಿ, ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಇದರ ನಂತರ, ಕೇವಲ 25% ಅಗ್ನಿವೀರ್‌ಗಳನ್ನಾಗಿ ಉಳಿಸಿಕೊಳ್ಳಲಾಗುತ್ತದೆ ಮತ್ತು ಉಳಿದವರನ್ನು ಬಿಡುಗಡೆ ಮಾಡಲಾಗುತ್ತದೆ. 2022ರಲ್ಲಿ ಅಗ್ನಿವೀರ್ ಯೋಜನೆ ಅನುಷ್ಠಾನಗೊಂಡಾಗಿನಿಂದ ಈ ಯೋಜನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

2024ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಈ ಹೊಸ ಸೇನಾ ನೇಮಕಾತಿ ಯೋಜನೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡುತ್ತಾ, ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯು ಮೊದಲಿನಿಂದಲೂ ಹೆಚ್ಚು ಟೀಕೆಗೊಳಗಾಗಿದೆ ಮತ್ತು ನಾವು ಚುನಾವಣೆಗಳಲ್ಲಿ ಅದರ ಪರಿಣಾಮವನ್ನು ನೋಡಿದ್ದೇವೆ. ಆದ್ದರಿಂದ ಸೇನಾ ನೇಮಕಾತಿಯಲ್ಲಿ ನಾವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಅಗ್ನಿವೀರ್ ಯೋಜನೆ ಬಗ್ಗೆ ಒಂದು ವರ್ಗದ ಮತದಾರರು ಅಸಮಾಧಾನಗೊಂಡಿದ್ದಾರೆ. ಯೋಜನೆ ಬಗ್ಗೆ ಸಾರ್ವಜನಿಕರು ಎತ್ತಿತೋರಿಸಿರುವ ಲೋಪದೋಷಗಳನ್ನು ವಿಸ್ತೃತವಾಗಿ ಚರ್ಚಿಸಿ ತೆಗೆದುಹಾಕಬೇಕು ಎಂದು ನಮ್ಮ ಪಕ್ಷ ಬಯಸುತ್ತದೆ. ಯುಸಿಸಿ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾನೂನು ಆಯೋಗದ ಮುಖ್ಯಸ್ಥರಿಗೆ ಸಿಎಂ ಪತ್ರ ಬರೆದಿದ್ದರು. ನಾವು ಇದಕ್ಕೆ ವಿರುದ್ಧವಾಗಿಲ್ಲ ಆದರೆ ಎಲ್ಲರೊಂದಿಗೆ ಮಾತನಾಡುವ ಮೂಲಕ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ತ್ಯಾಗಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಯುಸಿಸಿಯನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದರು. ಇನ್ನೊಂದು ಕಡೆ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಳ್ಳಬೇಕು, ಅದು ಅಗ್ನಿವೀರ್ ವ್ಯವಸ್ಥೆಯನ್ನು ಪರಿಚಯಿಸಬಾರದಿತ್ತು ಎಂದು ಹೇಳಿದ್ದಾರೆ.

Previous Post
ದೆಹಲಿಗೆ ನೀರು ಹರಿಸಲು ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ನಿರ್ದೇಶನ
Next Post
100ಕ್ಕೆ ತಲುಪಿದ ಕಾಂಗ್ರೆಸ್ ಸಂಸದರ ಸಂಖ್ಯೆ

Recent News