ಅತ್ಯಚಾರ ಆರೋಪ ; ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ
ನವದೆಹಲಿ : ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್ ಶುಕ್ರವಾರ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠವು ಮಹಿಳೆಯ ಅರ್ಜಿಯನ್ನು ವ್ಯವಹರಿಸುವಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವಂತೆ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ಮನವಿ ಮಾಡಿದೆ.
ಸಂತ್ರಸ್ಥ ಮಹಿಳೆಯು 361 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾದ ರಕ್ಷಣೆಯ ವ್ಯಾಪ್ತಿಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ರಾಜ್ಯಪಾಲರ ಅಧಿಕಾರದ ಅವಧಿಯಲ್ಲಿ ರಾಜ್ಯಪಾಲರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಗಳನ್ನು ಮುಂದುವರಿಸಲಾಗುವುದಿಲ್ಲ ಎಂದು ಕಾನೂನು ಹೇಳುತ್ತಿದ್ದು ಇದನ್ನು ಈಗ ಪ್ರಶ್ನಿಸಿದೆ.
ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ರಾಜಭವನದ ಮಹಿಳಾ ಸಿಬ್ಬಂದಿಯೊಬ್ಬರು ಆರೋಪಿಸಿದ್ದರು. ರಾಜಭವನದ ಆವರಣದಲ್ಲಿ ಉತ್ತಮ ಕೆಲಸ ನೀಡುವುದಾಗಿ ರಾಜ್ಯಪಾಲರು ಏಪ್ರಿಲ್ 24 ಮತ್ತು ಮೇ 2 ರಂದು ತನಗೆ ಕರೆ ಮಾಡಿದ್ದರು ಮತ್ತು ಲೈಗಿಂಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.