ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ, ಕೇಜ್ರಿವಾಲ್ ಬಹಿರಂಗಪಡಿಸಲಿದ್ದಾರೆ – ಸುನೀತಾ ಕೇಜ್ರಿವಾಲ್

ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ, ಕೇಜ್ರಿವಾಲ್ ಬಹಿರಂಗಪಡಿಸಲಿದ್ದಾರೆ – ಸುನೀತಾ ಕೇಜ್ರಿವಾಲ್

ನವದೆಹಲಿ : ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂದು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ಬಹಿರಂಗ ಪಡಿಸಲಿದ್ದಾರೆ, ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರು ಮುಂದೆ ತಿಳಿಸುತ್ತೇನೆ ಎಂದು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ನಮ್ಮ‌ ನಿವಾಸದ ಮೇಲೆ ದಾಳಿ ನಡೆಸಿದಾಗ ಇಡಿ ಅಧಿಕಾರಿಗಳಿಗೆ ಕೇವಲ 75000 ಲಭಿಸಿದೆ. ಇಡಿ 250 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ ಹಣಕ್ಕಾಗಿ ಹುಡುಕುತ್ತಿದ್ದಾರೆ ಅವರಿಗೆ ಈವರೆಗೂ ಏನೂ ಸಿಕ್ಕಿಲ್ಲ ಎಂದು ಹೇಳಿದರು.

ಎರಡು ದಿನಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಜಲಸಚಿವ ಅತಿಶಿ ಅವರಿಗೆ ಪತ್ರವೊಂದನ್ನು ಕಳುಹಿಸಿದ್ದಾರೆ, ಈಗ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸಿದೆ ಅವರು ದೆಹಲಿಯನ್ನು ನಾಶಮಾಡಲು ಬಯಸುತ್ತಾರೆಯೇ? ಜನರು ನರಳುತ್ತಲೇ ಇರಬೇಕೆಂದು ಅವರು ಬಯಸುತ್ತಾರೆಯೇ? ಅರವಿಂದ್ ಕೇಜ್ರಿವಾಲ್‌ಗೆ ಇ ಘಟನೆಯಿಂದ ತುಂಬಾ ನೋವಾಗಿದೆ ಎಂದರು.

ತಮ್ಮ ಪತಿ ನಿಜವಾದ ದೇಶಭಕ್ತ, ನಿರ್ಭೀತ ಮತ್ತು ಧೈರ್ಯಶಾಲಿ ವ್ಯಕ್ತಿ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ಜನರು ಬಯಸುತ್ತಾರೆ. ಅವರು ದೈಹಿಕವಾಗಿ ಜೈಲಿನಲ್ಲಿದ್ದರೂ, ಅವರ ಆತ್ಮವು ಜನರ ನಡುವೆ ಇದೆ ಎಂದು ಸುನೀತಾ ಕೇಜ್ರಿವಾಲ್ ಹೇಳಿದರು‌. ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿರುವ ಇಡಿ ಮಾರ್ಚ್ 28 ವರೆಗೂ ಕಸ್ಟಡಿಗೆ ಪಡೆದುಕೊಂಡಿದೆ.

Previous Post
ಕೋರ್ಟ್ ಆವರಣದಲ್ಲಿ ಪ್ರತಿಭಟನೆ ಗಂಡಾಂತರ ಆಹ್ವಾನಿಸಿದಂತೆ ಆಪ್‌ ಪ್ರತಿಭಟನೆ ಹೇಳಿಕೆಗೆ ದೆಹಲಿ ಹೈಕೋರ್ಟ್ ಎಚ್ಚರಿಕೆ
Next Post
ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕಾ ಪ್ರತಿಕ್ರಿಯೆ ರಾಜತಾಂತ್ರಿಕ ಅಧಿಕಾರಿಗೆ ಸಮನ್ಸ್ ನೀಡಿದ ಭಾರತ

Recent News