ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.

ಖಂಡು ಅವರು ಬುಧವಾರ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 44 ವಯಸ್ಸಿನ ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅರುಣಾಚಲ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಖಂಡು ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು. 60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭೆ ಚುನಾವಣೆಯ ಜೊತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು.

Previous Post
ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆಗೊಳಿಸಿದ ಜಮ್ಮು ಕಾಶ್ಮೀರದ ಪೊಲೀಸರು
Next Post
ನೀಟ್‌ ಯುಜಿ ವಿವಾದ 1563: ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕ ರದ್ದು ಜುಲೈ 8 ರಂದು ಎಲ್ಲಾ ಅರ್ಜಿಗಳ ವಿಚಾರಣೆ – ಸುಪ್ರೀಂ

Recent News