ಆರೋಗ್ಯ ಸಮಸ್ಯೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

ಆರೋಗ್ಯ ಸಮಸ್ಯೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ವಿಸ್ತರಣೆ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಮಂಗಳವಾರ ನಿರಾಕರಿಸಿತು ಮತ್ತು ಅರ್ಜಿಯ ಪಟ್ಟಿಯನ್ನು ವಿಚಾರಣೆಗೆ ಹೆಚ್ಚಿನ ನಿರ್ದೇಶನಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಕಳುಹಿಸಿದೆ ಎಂದು ತಿಳಿಸಿದೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ವೈದ್ಯಕೀಯ ಕಾರಣಗಳಿಗಾಗಿ ಜೂನ್ 1 ರಂದು ಮುಕ್ತಾಯಗೊಳ್ಳಲಿರುವ ಅವರ ಮಧ್ಯಂತರ ಜಾಮೀನಿಗೆ ಏಳು ದಿನಗಳ ವಿಸ್ತರಣೆಯನ್ನು ಕೋರಿದ್ದರು, ಇದರ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಜೆ.ಕೆ ಮಹೇಶ್ವರಿ ಮತ್ತು ಕೆ ವಿ ವಿಶ್ವನಾಥನ್ ಅವರ ರಜಾಕಾಲದ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿತು. ಪ್ರಕರಣವನ್ನು ನಾವು ಆಲಿಸಿದ್ದೇವೆ ಆದರೆ ಇದನ್ನು ಮುಖ್ಯನ್ಯಾಯಮೂರ್ತಿಗಳ ಗಮನಕ್ಕೆ ತರಬೇಕಾಗಿದೆ ಈ ಹಿನ್ನಲೆ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿತು.

ಇದೇ ವೇಳೆ ಮಧ್ಯಂತರ ಜಾಮೀನನ್ನು ಸುಪ್ರೀಂಕೋರ್ಟ್ ಅನುಮೋದಿಸಿದಾಗ ಇದನ್ನು ಏಕೆ ಉಲ್ಲೇಖಿಸಲಿಲ್ಲ ಎಂದು ಪೀಠವು ಕೇಳಿತು. ಇದಕ್ಕೆ ಉತ್ತರಿಸಿದ ವಕೀಲ ಸಿಂಘ್ವಿ, ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ವರದಿಯನ್ನು ಪಡೆದ ಬಳಿಕ ಜಾಮೀನು ವಿಸ್ತರಣೆ ಅರ್ಜಿಯನ್ನು ಏಳು ದಿನಗಳವರೆಗೆ ವಿಸ್ತರಿಸಲು ನಿರ್ಧರಿಸಿ ಅರ್ಜಿ ಸಲ್ಲಿಸಲಿದೆ ಹೀಗಾಗೀ ಸ್ವಲ್ಪ ಸಮಯ ತೆಗೆದುಕೊಂಡಿತು ಎಂದು ಹೇಳಿದರು. ಅದಾಗ್ಯೂ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆಗೊಂಡಿದೆ.

Previous Post
ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಹೆಚ್ಚಳ: ರಾಹುಲ್ ಗಾಂಧಿ
Next Post
ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣ :ಆರೋಪಿಗಳಾದ ನವೀನ ಗೌಡ, ಚೇತನನ್ನು ಬಂಧಿಸಿದ ‘SIT’

Recent News