ಆರ್ಟಿಕಲ್ 370 ರದ್ದು, ಸರ್ಕಾರದ ಪರ ಸುಪ್ರೀಂಕೋರ್ಟ್ ಆದೇಶ, ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಆರ್ಟಿಕಲ್ 370 ರದ್ದು, ಸರ್ಕಾರದ ಪರ ಸುಪ್ರೀಂಕೋರ್ಟ್ ಆದೇಶ, ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ಜಮ್ಮು ಕಾಶ್ಮೀರದಲ್ಲಿನ ಆರ್ಟಿಕಲ್ 370 ರದ್ದು ಮಾಡಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದು ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಮುಖ್ಯ ನ್ಯಾ. ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ತನ್ನ ಚೇಂಬರ್ ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿ ವಜಾ ಮಾಡಿದೆ.

ಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನಲೆ ಸುಪ್ರೀಂ ಕೋರ್ಟ್ ನಿಯಮಗಳು 2013 ರ ಆದೇಶ XLVII ನಿಯಮ 1 ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದ ಕೋರ್ಟ್ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

Previous Post
ದೆಹಲಿಯಲ್ಲಿ ಕರ್ನಾಟಕ ಎಎಪಿ ಮುಖಂಡರಿಂದ ಚುನಾವಣಾ ಪ್ರಚಾರ
Next Post
ಸಿದ್ದರಾಮಯ್ಯ ʻಸಿಟಿ ರೌಂಡ್ಸ್‌ʼ : ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Recent News