ಇಂದು ಲೋಕಸಭೆಗೆ ಆರನೇ ಹಂತದ ಮತದಾನ

ಇಂದು ಲೋಕಸಭೆಗೆ ಆರನೇ ಹಂತದ ಮತದಾನ

ನವದೆಹಲಿ : ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನ ಇಂದು ನಡೆಯಲಿದೆ. ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಹಾರದ 8, ಹರಿಯಾಣ ಎಲ್ಲಾ 10 ಸ್ಥಾನಗಳು, ಜಮ್ಮು ಮತ್ತು ಕಾಶ್ಮೀರ 1 , ಜಾರ್ಖಂಡ್ 4 ದೆಹಲಿ ಎಲ್ಲಾ 7 ಸ್ಥಾನಗಳು, ಒಡಿಶಾ 6, ಉತ್ತರ ಪ್ರದೇಶ 14 ಮತ್ತು ಪಶ್ಚಿಮ ಬಂಗಾಳ 8 ಸ್ಥಾನಗಳಿಗೆ ಮತದಾನ ನಡೆಯಲಿದೆ.

889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದು ಚುನಾವಾಣೆಗಾಗಿ ಆಯೋಗ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. 1.14 ಲಕ್ಷ ಮತಗಟ್ಟೆಗಳ ನಿರ್ಮಾಣ ಮಾಡಿದ್ದು ಒಟ್ಟು 11.4 ಲಕ್ಷ ಮತಗಟ್ಟೆ ಅಧಿಕಾರಿಗಳ ನೇಮಕ ಮಾಡಿದೆ. 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. 8.93 ಲಕ್ಷಕ್ಕೂ ಹೆಚ್ಚು 85+ ವರ್ಷ ಮೇಲ್ಪಟ್ಟ ಹಾಗೂ 23,659 ಮಂದಿ 100 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಒಳಗೊಂಡಿದ್ದಾರೆ.

ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯಲು 20 ವಿಶೇಷ ರೈಲುಗಳನ್ನು ನಿಯೋಜನೆ ಮಾಡಿದೆ, 184 ವೀಕ್ಷಕರು, 2222 ಫ್ಲೈಯಿಂಗ್ ಸ್ಕ್ವಾಡ್‌ಗಳ ನೇಮಕ ಮಾಡಿದೆ. 257 ಅಂತರಾಷ್ಟ್ರೀಯ ಗಡಿ ಚೆಕ್ ಪೋಸ್ಟ್‌ಗಳು ಮತ್ತು 927 ಅಂತರ-ರಾಜ್ಯ ಗಡಿ ಚೆಕ್ ಪೋಸ್ಟ್‌ಗಳು ನಿಯೋಜನೆ ಮಾಡಿದ್ದು ಚುನಾವಣಾ ಅಕ್ರಮ ತಡೆಯಲು ತಯಾರಿ ಮಾಡಿಕೊಂಡಿದೆ.

ಬಿಹಾರದಲ್ಲಿ ಈ ಹಂತದಲ್ಲಿ ಒಟ್ಟು ಎಂಟು ಸ್ಥಾನಗಳಿಗೆ ಮತದಾನ ನಡೆಯಲಿದೆ. ವಾಲ್ಮೀಕಿನಗರ, ಪಶ್ಚಿಮ ಚಂಪಾರಣ್, ಪೂರ್ವ ಚಂಪಾರಣ್, ಶಿವಾರ್, ವೈಶಾಲಿ, ಗೋಪಾಲ್‌ಗಂಜ್, ಸಿವಾನ್ ಮತ್ತು ಮಹಾರಾಜ್‌ಗಂಜ್​ನಲ್ಲಿ ಮತದಾನ ನಡೆಯಲಿದ್ದು, 86 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 20 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅನಂತನಾಗ್-ರಜೌರಿ ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹರಿಯಾಣದ ಎಲ್ಲಾ 10 ಸ್ಥಾನಗಳಿಗೆ ಮತದಾನ ಜರುಗಲಿದೆ. ಇಲ್ಲಿ ಒಟ್ಟು 223 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಹಂತದಲ್ಲಿ ಅಂಬಾಲಾ, ಕುರುಕ್ಷೇತ್ರ, ಸಿರ್ಸಾ, ಹಿಸಾರ್, ಕರ್ನಾಲ್, ಸೋನಿಪತ್, ರೋಹ್ಟಕ್, ಭಿವಾನಿ-ಮಹೇಂದ್ರಗಢ, ಗುರ್ಗಾಂವ್ ಮತ್ತು ಫರಿದಾಬಾದ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಜಾರ್ಖಂಡ್‌ನ 4 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಒಟ್ಟು 93 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ಹಂತದಲ್ಲಿ ಗಿರಿದಿಹ್, ಧನ್ಬಾದ್, ರಾಂಚಿ ಮತ್ತು ಜಮ್ಶೆಡ್‌ಪುರ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೆಹಲಿಯ ಎಲ್ಲ 7 ಸ್ಥಾನಗಳಿಗೂ ಚುನಾವಣೆ ನಡೆಯಲಿದ್ದು 162 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಾಂದಿನಿ ಚೌಕ್, ಈಶಾನ್ಯ ದೆಹಲಿ, ಪೂರ್ವ ದೆಹಲಿ, ನವದೆಹಲಿ, ವಾಯುವ್ಯ ದೆಹಲಿ, ಪಶ್ಚಿಮ ದೆಹಲಿ ಮತ್ತು ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಜ್ಜಾಗಿವೆ.

ಒಡಿಶಾದ 6 ಸ್ಥಾನಗಳಿಗೆ ನಡೆಯುವ ಈ ಹಂತದ ಚುನಾವಣೆಯಲ್ಲಿ ಒಟ್ಟು 64 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸಂಬಲ್ಪುರ, ಕಿಯೋಂಜರ್, ಧೆಂಕನಲ್, ಪುರಿ, ಭುವನೇಶ್ವರ ಮತ್ತು ಕಟಕ್ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 14 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಒಟ್ಟು 162 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸುಲ್ತಾನ್‌ಪುರ, ಪ್ರತಾಪ್‌ಗಢ, ಫುಲ್‌ಪುರ್, ಅಲಹಾಬಾದ್, ಅಂಬೇಡ್ಕರ್ ನಗರ, ಶ್ರಾವಸ್ತಿ, ದುಮರಿಯಾಗಂಜ್, ಬಸ್ತಿ, ಸಂತ ಕಬೀರ್ ನಗರ, ಲಾಲ್‌ಗಂಜ್, ಅಜಂಗಢ, ಜೌನ್‌ಪುರ್, ಮಚ್ಲಿಶಹರ್ ಮತ್ತು ಭದೋಹಿಯಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಕಣದಲ್ಲಿ ಒಟ್ಟು 79 ಅಭ್ಯರ್ಥಿಗಳಿದ್ದಾರೆ. ಈ ಹಂತದಲ್ಲಿ ತಮ್ಲುಕ್, ಕಂಠಿ, ಘಟಾಲ್, ಜಾರ್ಗ್ರಾಮ್ (ಎಸ್ಟಿ), ಮೇದಿನಿಪುರ್, ಪುರುಲಿಯಾ, ಬಂಕುರಾ ಮತ್ತು ಬಿಷ್ಣುಪುರ್ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪ್ರಮುಖ ಅಭ್ಯರ್ಥಿಗಳು

ನವದೆಹಲಿ – ಬನ್ಸೂರಿ ಸ್ವರಾಜ್ ( ಬಿಜೆಪಿ )
ಈಶಾನ್ಯ ದೆಹಲಿ – ಮನೋಜ್ ತಿವಾರಿ ಬಿಜೆಪಿ, ಕನ್ಹಯ್ಯಾ ಕುಮಾರ್ ( ಕಾಂಗ್ರೇಸ್ )
ರೊಹ್ಟಕ್ – ದೀಪೇಂದ್ರ ಸಿಂಗ್ ಹೂಡಾ ( ಕಾಂಗ್ರೇಸ್ )
ಸಂಬಲ್‌ಪುರ – ಧರ್ಮೇಂದ್ರ ಪ್ರಧಾನ್ (ಬಿಜೆಪಿ)
ಸುಲ್ತಾನ್‌ಪುರ – ಮೇನಕಾ ಗಾಂಧಿ (ಬಿಜೆಪಿ), ಅನಂತನಾಗ್-ರಾಜೌರಿ -ಮೆಹಬೂಬಾ ಮುಫ್ತಿ (ಪಿಡಿಪಿ) ತಮ್ಲುಕ್‌ – ಅಭಿಜಿತ್ ಗಂಗೋಪಾಧ್ಯಾಯ (ಬಿಜೆಪಿ)
ಕರ್ನಾಲ್ – ಮನೋಹರ್ ಲಾಲ್ ಖಟ್ಟರ್ (ಬಿಜೆಪಿ)
ಕುರುಕ್ಷೇತ್ರ – ನವೀನ್ ಜಿಂದಾಲ್ (ಬಿಜೆಪಿ)
ಗುರ್‌ಗಾಂವ್ – ಇಂದರ್‌ಜಿತ್ ಸಿಂಗ್ ( ಬಿಜೆಪಿ )

Previous Post
ಆಯೋಗ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ: ಕಾಂಗ್ರೆಸ್
Next Post
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Recent News