ಉಪ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಜಯ

ಉಪ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಜಯ

ನವದೆಹಲಿ : ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ನಡೆದ ಎಂಟು ರಾಜ್ಯಗಳ 13 ವಿಧಾನಸಭಾ ಉಪಚುನಾವಣಾ ಫಲಿತಾಂಶದಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ ಸಾಧಿಸಿದ್ದು ಬಿಜೆಪಿಗೆ ಹಿನ್ನಡೆಯಾಗಿದೆ. 13 ವಿಧಾನಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಟಿಎಂಸಿ ತಲಾ ನಾಲ್ಕು ಕ್ಷೇತ್ರಗಳಲ್ಲಿ, ಬಿಜೆಪಿ 2 ಸ್ಥಾನ, ಡಿಎಂಕೆ ಮತ್ತು ಆಪ್ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿವೆ. ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ.

ಪಶ್ವಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಎಲ್ಲಾ ನಾಲ್ಕು ಸ್ಥಾನಗಳನ್ನು ಭರ್ಜರಿಯಾಗಿ ಗೆದ್ದುಕೊಂಡಿತು. ರಾಯ್‌ಗಂಜ್‌ನಲ್ಲಿ ಕೃಷ್ಣ ಕಲ್ಯಾಣಿ, ರಾಣಾಘಾಟ್ ದಕ್ಷಿಣಿಯಲ್ಲಿ ಮುಕ್ತ ಮಣಿ ಅಧಿಕಾರಿ, ಬಗಡ್‌ನಲ್ಲಿ ಮಧುಪ್ರಾಣ ಠಾಕೂರ್, ಮುಣ್ಟಿಕಲ್ ನಲ್ಲಿ ಸುಪ್ತಿ ಪಾಂಡೆ ಗೆಲುವು ಸಾಧಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಎರಡನ್ನು ಗೆದ್ದುಕೊಂಡಿದೆ. ದೇರಾದಲ್ಲಿ ಕಮಲೇಶ್ ಠಾಕೂರ್, ನಾಲಘ್ರಾ ಹರಿದೀಪ್ ಸಿಂಗ್ ಭಾವಾ ಜಯ ಗಳಿಸಿದ್ದಾರೆ. ಹಮೀರ್‌ಪುರನಲ್ಲಿ ಬಿಜೆಪಿಯ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ.

ಉತ್ತರಖಾಂಡ್‌ನಲ್ಲಿ ಬದರಿನಾಥ್ ಮತ್ತು ಮಂಗಳೂರ್ ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಗೆಲುವು ಸಾಧ್ಯವಾಯಿತು. ಬದ್ರಿನಾಥದಲ್ಲಿ ಕಾಂಗ್ರೆಸ್‌ನ ಲಖಪತ್ ಸಿಂಗ್ ಬುಟೋಲಾ ಅವರು ಬಿಜೆಪಿ ಅಭ್ಯರ್ಥಿ ರಾಜೇಂದ್ರ ಸಿಂಗ್ ಭಂಡಾರಿ ವಿರುದ್ದ 5, 224 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ತ್ರಿಕೋನ ಸ್ಪರ್ಧೆಯಲ್ಲಿ ಜಲಂಧರ್ ಪಶ್ಚಿಮ ಕ್ಷೇತ್ರವನ್ನು ಪಡೆದುಕೊಂಡಿದೆ. ತಮಿಳುನಾಡಿನಲ್ಲಿ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರವನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಶಪಡಿಸಿಕೊಂಡಿದೆ.

ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಶಂಕರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಅಮರವಾರ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾ ಅವರು ಕಾಂಗ್ರೆಸ್‌ನ ಧೀರನ್ ಶಾ ಇನ್ವಾಟಿ ಅವರನ್ನು 3,027 ಮತಗಳ ಅಂತರದಿಂದ ಸೋಲಿಸಿದ್ದಾರೆ

Previous Post
ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ
Next Post
ಕಾನೂನು ವಿದ್ಯಾರ್ಥಿಗಳ ಪಠ್ಯದಲ್ಲಿ ಮನಸ್ಮೃತಿ ಇಲ್ಲ: ಕೇಂದ್ರ ಸಚಿವ ಸ್ಪಷ್ಟನೆ

Recent News