ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ

ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಸತತ ಮೂರನೇ ಬಾರಿಗೆ ಸರ್ಕಾರ ರಚಿಸಿದ ಮೋದಿ ಕ್ಯಾಬಿನೆಟ್​ನಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಫರ್ಧಿಸಿ ಗೆಲುವು ಸಾಧಿಸಿದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್​ ಕಚೇರಿಗೆ ತೆರಳಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್​ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪರಿಷತ್ ಸದಸ್ಯ ಬೋಜೇಗೌಡ, ಮಾಜಿ ಎಂಎಲ್‌ಸಿ ಚೌಡರೆಡ್ಡಿ ಉಪಸ್ಥಿತರಿದ್ದರು. ಎಚ್​.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವುದರಿಂದ ಶಾಸಕ ಸ್ಥಾನ ತೆರವಾಗಿದ್ದು ಬೊಂಬೆನಾಡು ಚನ್ನಪಟ್ಟಣ ಈಗ ಉಪಚುನಾವಣೆ ಎದುರಿಸಲಿದೆ.

Previous Post
ಎನ್‌ಕೌಂಟರ್‌: 8 ನಕ್ಸಲೀಯರ ಹತ್ಯೆ, ಓರ್ವ ಯೋಧ ಹುತಾತ್ಮ
Next Post
ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

Recent News