Prioritize proper management of Eta irrigation schemes: Minister NS Bhosaraju

ಏತ ನೀರಾವರಿ ಯೋಜನೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಎನ್‌ ಎಸ್‌ ಭೋಸರಾಜು

ಹಾವೇರಿ ಸೆಪ್ಟೆಂಬರ್‌ 04 : ಏತ ನೀರಾವರಿ ಯೋಜನೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹಾವೇರಿ ಜಿಲ್ಲೆ ಹಾನಗಲ್‌ ತಾಲ್ಲೂಕಿನಲ್ಲಿ ವರದಾ ನದಿಯ ನೀರನ್ನ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ತುಂಬಿಸುವ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು. ಚಿಕ್ಕ ಹುಲ್ಯಾಳ ಗ್ರಾಮ, ಸಮ್ಮಸಗಿ ಹಾಗೂ ಸುತ್ತಮುತ್ತಲಿನ ಏತ ನೀರಾವರಿ ಯೋಜನೆಗಳು, ಮಕರವಳ್ಳಿ ಏತ ನೀರಾವರಿ ಯೋಜನೆಯ ಪುನಶ್ಚೇತನ ಕಾಮಗಾರಿಯ ವೀಕ್ಷಣೆ ನಡೆಸಿದರು. ಹಿರೇಕೆರೂರು ತಾಲ್ಲೂಕಿನ ಕಚವಿ ಕೆರೆಯ ವೀಕ್ಷಣೆ ನಡೆಸಿ ಗ್ರಾಮಕ್ಕೆ ನೀರು ಹರಿಯದಂತೆ ನಡೆಸಿರುವ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು.

ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು, ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಳದ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಹಲವಾರು ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಯೋಜನೆಗಳು ಪೂರ್ಣಗೊಂಡ ನಂತರ ಅವುಗಳ ಸಮರ್ಪಕ ನಿರ್ವಹಣೆ ಬಹಳ ಅಗತ್ಯ. ಇದರ ಬಗ್ಗೆ ಹೆಚ್ಚಿನ ಗಮನ ನೀಡುವ ಮೂಲಕ ಜನರಿಗೆ ತೊಂದರೆ ಅಗದ ರೀತಿಯಲ್ಲಿ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಗಸ್ಟ್‌ 21 ರಂದು ಹಿರೇಕೆರೂರು ತಾಲ್ಲೂಕಿನ ಕಚವಿ ಕೆರೆ ಪೂರ್ಣ ಪ್ರಮಾಣದಲ್ಲಿ ತುಂಬಿ ಕೋಡಿಯ ಮೇಲೆ ನೀರು ಹರಿದು ಗ್ರಾಮಕ್ಕೆ ನುಗ್ಗಿದ್ದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ  ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಕೆರೆಯ ನೀರು ಕೇವಲ ಅಂತರ್ಜಲಕ್ಕೆ ಮರುಪೂರಣಕ್ಕೆ ಬಳಕೆಯಾಗುತ್ತಿದೆ. ಮಳೆಯಾದ ಪರಿಣಾಮ ಹೆಚ್ಚಿನ ಪ್ರಮಾಣದ ನೀರು ಹರಿದು ಕೋಡಿಯ ಮೇಲಿನಿಂದ ನೀರು ಗ್ರಾಮಕ್ಕೆ ನುಗ್ಗಿದೆ. ಇದು ಮರುಕಳಿಸದೇ ಇರುವ ರೀತಿಯಲ್ಲಿ ಅಗತ್ಯ ಕಾಮಗಾರಿಗಳ ಬಗ್ಗೆ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಗಳು ಪೂರ್ಣವಾಗಲು ಅಗತ್ಯವಿರುವಂತಹ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಈ ಸಂಧರ್ಭದಲ್ಲಿ ಹಾನಗಲ್‌ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸ ಮಾನೆ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ರಾಘವನ್‌ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು .

 

Previous Post
ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೂ ಗೊತ್ತಿದೆ: ರಾಧಿಕಾ
Next Post
ಇಡಿ ನಡೆಗೆ ಸುಪ್ರೀಂ ಕೋರ್ಟ್ ಕಿಡಿ

Recent News