ಏಪ್ರಿಲ್ 30ರಂದು ಈ ಜಿಲ್ಲೆಗಳ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜಿಗೆ ರಜೆ ಘೋಷಣೆ
ಚಾಮರಾಜನಗರ, ಏಪ್ರಿಲ್, 29: ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ನಿಧನ ಹಿನ್ನೆಲೆ ಮೈಸೂರು ಹಾಗೂ ಚಾಮರಾಜನಗರದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಸೋಮವಾರ ಈ ಆದೇಶ ಹೊರಬಿದ್ದಿದ್ದು, ಮಂಗಳವಾರದಂದು ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಪೂರ್ವ ನಿಗದಿಯಾಗಿದ್ದ ಪರೀಕ್ಷೆಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜಿಗೂ, ಅನುದಾನಿತ ಎಲ್ಲಾ ವಿದ್ಯಾಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಇನ್ನು ವಿ.ಶ್ರೀನಿವಾಸಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಬೇಕು ಎಂದು ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಆದೇಶ ಹೊರಡಿಸಿದ್ದಾರೆ.