ಕತಾರ್‌ಗೆ ಸಚಿವ ಜೈಶಂಕರ್ ಭೇಟಿ: ದ್ವಿಪಕ್ಷೀಯ ಸಂಬಂಧ ವೃದ್ಧಿ ಭರವಸೆ
ದೋಹಾ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕತಾರ್‌ಗೆ ಭೇಟಿ ನೀಡಿದ್ದು, ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು.
ರಾಜಕೀಯ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಸಂಸ್ಕೃತಿ ಸೇರಿದಂತೆ ಹಲವು ವಿಷಯಗಳ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಸಿದರು.
ಜೈಶಂಕರ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಪ್ರಧಾನಿ ಥನಿ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಾಯಿತು. ಗಾಜಾ ಪರಿಸ್ಥಿತಿಯ ಕುರಿತು ಅವರ ವಿಚಾರಗಳನ್ನು ಹಂಚಿಕೊಂಡಿರುವುದನ್ನು ಶ್ಲಾಘಿಸುತ್ತೇನೆ. ಭಾರತ-ಕತಾರ್ ಸಂಬಂಧಗಳ ವರ್ಧನೆಗೆ ಎದುರು ನೋಡುತ್ತೇವೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಮಾತುಕತೆಯನ್ನು ಮುಂದುವರೆಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಕತಾರ್‌ನಲ್ಲಿ ಗಲ್ಲು ಶಿಕ್ಷಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿ ಕಳೆದ ನಾಲ್ಕು ತಿಂಗಳ ಹಿಂದೆ ಬಿಡುಗಡೆಯಾಗಿ ಸ್ವದೇಶಕ್ಕೆ ವಾಪಸ್ಸಾಗಿದ್ದರು. ಆ ಘಟನೆಯ ಬಳಿಕ ಇದೇ ಮೊದಲ ಬಾರಿಗೆ ಜೈಶಂಕರ್ ಕತಾರ್‌ಗೆ ಭೇಟಿ ನೀಡಿದ್ದಾರೆ.