ಕಮಾಂಡೋ ಕಾರ್ಯಚರಣೆ ; 12 ನಕ್ಸಲರು ಸಾವು

ಕಮಾಂಡೋ ಕಾರ್ಯಚರಣೆ ; 12 ನಕ್ಸಲರು ಸಾವು

ಮುಂಬೈ: ಮಹಾರಾಷ್ಟ್ರದ ಕಂಕೇರ್ ಬಳಿಯ ಛತ್ತೀಸ್‌ಗಢ-ಗಡ್‌ಚಿರೋಲಿ ಗಡಿಯಲ್ಲಿರುವ ವಂಡೋಲಿ ಗ್ರಾಮದಲ್ಲಿ ಪೊಲೀಸ್ ಸಿ60 ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ.

ಕಾರ್ಯಾಚರಣೆ ವೇಳೆ ಸಬ್‌ಇನ್‌ಸ್ಪೆಕ್ಟರ್‌ ಸತೀಶ್ ಪಾಟೀಲ್ ಅವರ ಎಡ ಭುಜಕ್ಕೆ ಗುಂಡು ತಗುಲಿದೆ. ಈ ಪ್ರದೇಶದಲ್ಲಿ 12ರಿಂದ 15 ನಕ್ಸಲರು ಕ್ಯಾಂಪ್ ಮಾಡುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸಲಾಗಿತ್ತು.

ಎಲ್ಲಾ 12 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಯಂಚಾಲಿತ ಮೆಷಿನ್ ಗನ್‌ಗಳು, ಭಾರೀ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ನಕ್ಸಲೀಯರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಸಬ್‌ಇನ್ಸ್‌ಪೆಕ್ಟರ್ ಮತ್ತು ಜವಾನ ಗಾಯಗೊಂಡಿದ್ದಾರೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ರಾಜ್ಯ ಸರ್ಕಾರದ ಪರವಾಗಿ ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

Previous Post
ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಹೆಚ್ಚುವರಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ
Next Post
ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

Recent News