ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ನವದೆಹಲಿ, ಮಾ. 12: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್‌ ಮಂಗಳವಾರ ಬಿಡುಗಡೆ ಮಾಡಿದೆ. ನಾವು ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಕೇಂದ್ರ ಚುನಾವಣಾ ಸಮಿತಿಯ ಸಭೆ ಬಳಿಕ ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

43 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 10 ಸಾಮಾನ್ಯ ವರ್ಗ, 13 ಒಬಿಸಿ, 10 ಎಸ್ ಸಿ, 9 ಎಸ್ ಟಿ ಮತ್ತು ಒಬ್ಬರು ಮುಸ್ಲಿಂ ಅಭ್ಯರ್ಥಿ ಸೇರಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. ಎರಡನೇ ಪಟ್ಟಿಯಲ್ಲಿ ಮಧ್ಯಪ್ರದೇಶದ ಚಿಂದ್ವಾರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರ ಪುತ್ರ ನಕುಲ್, ರಾಜಸ್ಥಾನದ ಜಲೋರ್ ನಿಂದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್, ಅಸ್ಸಾಂನ ಜೋರ್ಹಟ್ ನಿಂದ ಗೌರವ್ ಗೊಗೋಯ್, ರಾಜಸ್ಥಾನದ ಚುರುನಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ರಾಹುಲ್ ಕಾಸ್ವಾ ಅವರಿಗೆ ಟಿಕೆಟ್ ನೀಡಲಾಗಿದೆ.

Previous Post
ಲೋಕಸಭೆ ಚುನಾವಣೆ : ಇಂದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ?
Next Post
ಚುನಾವಣಾ ಬಾಂಡ್: ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಂದ ರಾಷ್ಟ್ರಪತಿಗೆ ಪತ್ರ

Recent News