ಕಾಶ್ಮೀರದಲ್ಲಿ ಪರಿಸ್ಥಿತಿ ಪರಿಶೀಲಿಸಲು ಮೋದಿ ಸೂಚನೆ

ಕಾಶ್ಮೀರದಲ್ಲಿ ಪರಿಸ್ಥಿತಿ ಪರಿಶೀಲಿಸಲು ಮೋದಿ ಸೂಚನೆ

ನವದೆಹಲಿ : ಸರಣಿ ಭಯೋತ್ಪಾದಕ ದಾಳಿಗಳ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್‌ಗೆ ಪ್ರಧಾನಿ ನರೇಂದ್ರ‌ ಮೋದಿ ಸೂಚನೆ‌ ನೀಡಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮೋದಿ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಕಣಿವೆಯಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ದೇಶದ ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿಯನ್ನು ನಿಯೋಜಿಸಲು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ಭದ್ರತಾ ಪಡೆಗಳ ನಿಯೋಜನೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿದರು.

ಕಳೆದ ನಾಲ್ಕು ದಿನಗಳಲ್ಲಿ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ನಾಲ್ಕು ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಜವಾನನನ್ನು ಕೊಂದು ಏಳು ಭದ್ರತಾ ಸಿಬ್ಬಂದಿ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಹಿನ್ನಲೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.

Previous Post
ಭಾರತದಲ್ಲಿ ಪಾರದರ್ಶಕತೆ, ಶಾಂತಿಯುತ ಮತದಾನದ ನಡೆದಿದೆ ಪಾಕಿಸ್ತಾನ ವಿರೋಧ ಪಕ್ಷದ ನಾಯಕ ಶಿಬ್ಲಿ ಫರಾಜ್‌ ಮೆಚ್ಚುಗೆ
Next Post
ತಮಿಳಿಸೈ ಜತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

Recent News