ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವರಾದ ಅಮಿತ್ ಶಾ ಅವರನ್ನು ಸಂಸದ ಡಾ.ಸುಧಾಕರ್ ಭೇಟಿಯಾದರು. ಈ ವೇಳೆ ಬಯಲುಸೀಮೆ ಭಾಗದ ಅಭಿವೃದ್ಧಿ ಕುರಿತಂತೆ ವಿಸ್ತೃತವಾಗಿ ಚರ್ಚಿಸಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಸೇರಿದಂತೆ ಬಯಲುಸೀಮೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಸಲಹೆ ಮತ್ತು ಮಾರ್ಗದರ್ಶನ ನೀಡಿದರು


