ಕೇಂದ್ರ ಸರ್ಕಾರದ ಜೊತೆ ಚರ್ಚೆ, ಐದು ಬೆಳೆಗೆ ಬೆಂಬಲ ಬೆಲೆ ಖಾತರಿ ಕಾನೂನು ಪ್ರಸ್ತಾವನೆ

ಕೇಂದ್ರ ಸರ್ಕಾರದ ಜೊತೆ ಚರ್ಚೆ, ಐದು ಬೆಳೆಗೆ ಬೆಂಬಲ ಬೆಲೆ ಖಾತರಿ ಕಾನೂನು ಪ್ರಸ್ತಾವನೆ

ನವದೆಹಲಿ : ಹೆಸರುಕಾಳು, ಉದ್ದಿನಬೇಳೆ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳಿಗೆ ದೇಶಾದ್ಯಂತ ಎಂಎಸ್‌ಪಿ ಖಾತರಿ ಕಾನೂನು ನೀಡುವ ಪ್ರಸ್ತಾವನೆಯನ್ನು ಪ್ರತಿಭಟನಾ ನಿರತ ರೈತರ ಮುಂದಿಟ್ಟಿದ್ದು, ರೈತರು ಇದಕ್ಕೆ ಒಪ್ಪಿದ್ದರೆ, ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೊಂದಿಗೆ ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಕೇಂದ್ರ ಸರ್ಕಾರದ ನಿಯೋಗ ಹೇಳಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಜೊತೆಗೆ ಕೃಷಿ ಸಚಿವ ಅರ್ಜುನ್ ಮುಂಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಪ್ರಸ್ತಾಪ ಇಡಲಾಗಿದೆ. ರೈತರು ಇದಕ್ಕೆ ಒಪ್ಪಿಗೆ ಸೂಚಿಸಿದಲ್ಲಿ ಮೊದಲ ಹಂತದಲ್ಲಿ ಯೋಜನೆ ಜಾರಿ ಮಾಡಲಾಗುವುದು, ಮುಂದಿನ ಹಂತದಲ್ಲಿ ಇತರ ಬೆಳೆಗಳಿಗೂ ವಿಸ್ತರಿಸುವ ಚಿಂತನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ರೈತರ ಸಾಲ ಮನ್ನಾ ವಿಚಾರ, ಸ್ವಾಮಿನಾಥನ್ ವರದಿ ಜಾರಿ, ಡಬ್ಲ್ಯೂಟಿಓ ಒಪ್ಪಂದ, ರೈತರಿಗೆ ಪಿಂಚಣಿ ನೀಡುವ ಯೋಜನೆ ಬೆಳೆ ವಿಮೆ ಪದ್ಧತಿ, ಕಳೆದು ವರ್ಷ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಸಚಿವ ಪಿಯುಷ್ ಗೂಯಲ್ ತಿಳಿಸಿದ್ದಾರೆ.

ಸಭೆಯಲ್ಲಿ ಬಳಿಕ ಮಾತನಾಡಿದ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ, ನಾವು ಇನ್ನೂರಕ್ಕೂ ಹೆಚ್ಚು ಸಂಘಟನೆಗಳ ಮುಖಂಡರ ಜೊತೆ ಹಾಗೂ ವಿಷಯ ಪರಿಣಿತರ ಜೊತೆ ಚರ್ಚೆ ಮಾಡಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯದ ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯತರ ) ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಕೂಡಾ ಸಭೆಯಲ್ಲಿ ಭಾಗಿಯಾಗಿದ್ದರು.

Previous Post
ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂ – ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೇಸ್ ನಾಯಕರಿಗೆ ತಾತ್ಕಲಿಕ ರಿಲೀಫ್
Next Post
ಆರನೇ ಸಮನ್ಸ್‌ಗೂ ಗೈರಾದ ಸಿಎಂ ಅರವಿಂದ್ ಕೇಜ್ರಿವಾಲ್

Recent News