ಕೊನೆಗೂ ತಂಡದಲ್ಲಿ ಬದಲಾವಣೆ ಮಾಡಿದ ಆರ್‌ಸಿಬಿ

ಕೊನೆಗೂ ತಂಡದಲ್ಲಿ ಬದಲಾವಣೆ ಮಾಡಿದ ಆರ್‌ಸಿಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡುವುದಾಗಿ ತಿಳಿಸಿದರು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಆರ್‌ಸಿಬಿ ಲಕ್ನೋ ತಂಡವನ್ನು ಕಡಿಮೆ ರನ್‌ಗಳಿಗೆ ಕಟ್ಟಿಹಾಕಿ ಚೇಸಿಂಗ್ ಮಾಡುವ ರಣತಂತ್ರ ರೂಪಿಸಿದೆ.

ಕೊನೆಗೂ ತಂಡದಲ್ಲಿ ಬದಲಾವಣೆ ಕಳೆದ ಮೂರು ಪಂದ್ಯಗಳಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ಕಾರಣ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇತ್ತು. ಮೂರು ಪಂದ್ಯಗಳಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಮೊದಲ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ವೇಗದ ಬೌಲರ್ ಅಲ್ಜಾರಿ ಜೋಸೆಫ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಬದಲಾಗಿ ಎಡಗೈ ವೇಗಿ ರೀಸ್ ಟೋಪ್ಲೆ ಅವರಿಗೆ ಅವಕಾಶ ನೀಡಲಾಗಿದೆ. ಆದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ವೈಶಾಖ್ ವಿಜಯ್ ಕುಮಾರ್ ಅವರನ್ನು ಆರಂಭಿಕ ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಟ್ಟಿದ್ದು ಅಚ್ಚರಿ ಮೂಡಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ಕೂಡ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು ವೇಗಿ ಮೊಹ್ಸಿನ್ ಖಾನ್ ಬದಲಾಗಿ ಯಶ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿದೆ.

ಉಭಯ ತಂಡಗಳ ಆಡುವ ಬಳಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಮಯಾಂಕ್ ದಾಗರ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್, ಯಶ್ ದಯಾಳ್. ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕೆಎಲ್ ರಾಹುಲ್(ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.

Previous Post
6 ಐಪಿಎಸ್, 3 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ
Next Post
ED ವಕೀಲರ ಪಟ್ಟಿಯಲ್ಲಿ ಸುಷ್ಮಾ ಸ್ವರಾಜ್ ಪುತ್ರಿ ಹೆಸರು: ತಪ್ಪೊಪ್ಪಿಗೆ

Recent News