ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನ; ಏಪ್ರಿಲ್ 26 ರಿಂದ ಮೇ 31ರ ವರೆಗೆ ಏನೇನಾಯ್ತು ಸಂಪೂರ್ಣ ಮಾಹಿತಿ

ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನ; ಏಪ್ರಿಲ್ 26 ರಿಂದ ಮೇ 31ರ ವರೆಗೆ ಏನೇನಾಯ್ತು ಸಂಪೂರ್ಣ ಮಾಹಿತಿ

ಬೆಂಗಳೂರು, ಮೇ. 31: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮೇ 31 ರಂದು ಮಧ್ಯರಾತ್ರಿ 12.30 ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಎಸ್‌ಐಟಿ ಅವರನ್ನು ಬಂಧಿಸಿದೆ. ಜರ್ಮನಿಯ ಮ್ಯೂನಿಚ್‌ನಿಂದ ಬಂದ ನಂತರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ, ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದೆ. ಏಪ್ರಿಲ್ 27 ರಂದು ಜರ್ಮನಿಗೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಮೇ 31ರ ತಡರಾತ್ರಿ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಎಸ್‌ಐಟಿ ಬಲೆಗೆ ಬಿದ್ದರು.

ಪ್ರಜ್ವಲ್ ಪರಾರಿಯಾದಾಗಿನಿಂದ ಇದುವರೆಗೆ ಏನೇನಾಯ್ತು..? ಕಳೆದ ಏಪ್ರಿಲ್ ತಿಂಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ವೈರಲ್ ಆಗಿದ್ದವು. ಹಾದಿ ಬೀದಿಗಳಲ್ಲಿ ಎಸೆಯಲಾಗಿದ್ದವು ಎನ್ನಲಾದ ಇವುಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳಿದ್ದವು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳ ಸುದ್ದಿ ಮಾಡಲಿಲ್ಲ. ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಗಿದ ನಂತರ ಈ ಸುದ್ದಿ ಹೆಚ್ಚು ವೈರಲ್ ಆಗತೊಡಗಿತು. ಅದರಲ್ಲೂ ಪ್ರಕ್ವಲ್ ಪರಾರಿಯಾದ ನಂತರ ಸಿದ್ದಿಗೆ ಕಿಚ್ಚು ಹತ್ತಿಕೊಂಡಿತು. ಏಪ್ರಿಲ್.27: ರಾಜ್ಯದಲ್ಲಿ ಮೊದಲ ಹಂತದ ಲೋಕಚಣಾ ಚುನಾವಣೆ ಮುಗಿಯುತ್ತಿದ್ದಂತೆ ಪ್ರಜ್ಬಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದರು. ಏಪ್ರಿಲ್ 28: ಅಶ್ಲೀಲ ವಿಡಿಯೋ ಪ್ರಕರಣವನ್ನು ತನಿಖೆ ನಡೆಸಲು ರಾಜ್ಯ ಸರ್ಕಾರ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ವಿಶೆಷ ತನಿಖಾ ತಂಡ ರಚಿಸಿತ್ತು.

ಏಪ್ರಿಲ್ 29: ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪ್ರಜ್ವಲ್ ರೇವಣ್ಣ ವಿಎಉದ್ಧ ಎಸ್‌ಐಟಿ ಮೊದಲ ನೋಟಿಸ್ ನೀಡಿತ್ತು. ಮೇ 1: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಕೀಲರ ಮೂಲಕ 7 ದಿನಗಳ ಕಾಲವಕಾಶ ಕೋರಿದ್ದರು ಪ್ರಜ್ವಲ್ ರೇವಣ್ಣ. ಮೇ 2: ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲು ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿ.ಮೇ 5: ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಮೂಲಕ ಬ್ಲೂಕಾರ್ನರ್‌ ನೋಟಿಸ್ ಮೇ 18: ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಾರಂಟ್ ಜಾರಿ

ಮೇ 20: ತನಿಖೆ ಎದುರಿಸುವಂತೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮನವಿ. ಪ್ರಜ್ವಲ್ ರೇವಣ್ಣರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಎಸ್‌ಐಟಿ ಪತ್ರ. ಮೇ 23: ಎಲ್ಲಿದ್ದರೂ ಬಂದು ಶರಣಾಗುವಂತೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಎಚ್ಚರಿಕೆ. ಮೇ 27: ಮೇ 31 ರಂದು ನಾನು ದೇಶಕ್ಕೆ ವಾಪಸ್ ಆಗಿ, ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ. ಮೇ 28: ಜರ್ಮನಿಯ ಮ್ಯೂನಿಚ್‌‌ನಿಂದ ಬೆಂಗಳೂರಿಗೆ ಬರೋದಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ ಟಿಕೆಟ್ ಬುಕ್. ಮೇ 29: ಹಾಸನದ ಸಂಸದರ ನಿವಾಸದಲ್ಲಿ ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳು ವಶಕ್ಕೆ. ಮೇ 30: ಮ್ಯೂನಿಚ್‌‌ನಿಂದ ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಮೇ 31: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ. ಎಸ್‌ಐಟಿಯಿಂದ ಬಂಧನ.

Previous Post
ಜಮ್ಮು: ಕಂದಕಕ್ಕೆ ಉರುಳಿ ಬಿದ್ದ ಬಸ್: 21 ಮಂದಿ ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ
Next Post
ಧ್ಯಾನ ಮುಗಿಸಿದ ಮೋದಿ

Recent News