Union Minister Shobha Karandlaje apologized

ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚೆನೈ : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಗಂಬೀರವಾಗಿ ತೆಗೆದುಕೊಂಡು ಕೋರ್ಟ್‌ ನಲ್ಲಿ ದಾವೆ ಹೂಡಿದ್ದರು. ಈ ಸಂಬಂಧ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ.

ವಿಚಾರಣೆ ಆಲಿಸಿದ ಮದ್ರಾಸ್‌ ಹೈಕೋರ್ಟ್‌, ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.

Previous Post
ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್  ಸರ್ಕಾರ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
Next Post
ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಉಪಮುಖ್ಯಮಂತ್ರಿ 15 ದಿನ ಗಡುವು

Recent News